ಬೆಳಗಾವಿ: ಭೀಕರ ಪ್ರವಾಹದಿಂದ ತತ್ತರಿಸಿರುವ ಜನತೆಗೆ ಸದ್ಯಕ್ಕೆ ಬೇಕಿರುವುದು ಸಾಂತ್ವನ. ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೀಡಾದ ಜನರಿಗೆ ನನ್ನ ಆಸ್ತಿ ಮಾರಿಯಾದ್ರೂ ನಿಮ್ಮ ಬದುಕು ರೂಪಿಸಿಕೊಡುತ್ತೇನೆ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತ್ರಸ್ತರಿಗೆ ಧೈರ್ಯ ಹೇಳಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಜನರು ಯಾವುದೇ ಆತಂಕಕ್ಕೊಳಗಾಗುವುದು ಬೇಡ. ನಿಮ್ಮ ಬದುಕಿನ ಬಗ್ಗೆ ಚಿಂತೆ ಮಾಡಬೇಡಿ. ನಿಮ್ಮ ಜೊತೆ ನಾನಿದ್ದೇನೆ. ನನ್ನ ಆಸ್ತಿ ಮಾರಿಯಾದ್ರೂ ನಿಮಗೆ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಜನರ ಬಗ್ಗೆ ಕಾಳಜಿ ತೋರಿ ಕಳೆದ ಒಂದು ವಾರದಿಂದ ಪ್ರವಾಹ ಪೀಡಿತ ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.