ಬೆಳಗಾವಿ: ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನ ಚಾಲಕನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ.
ಮೂಡಲಗಿಯಿಂದ ಬೆಳಗಾವಿ ಕಡೆಗೆ ಬೊಲೆರೋ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸಲಾಗುತ್ತಿತ್ತು. ವಾಹನ ತಡೆದು ಪರಿಶೀಲಿಸಿದಾಗ ಜಾನುವಾರು ಸಾಗಣೆ ಪತ್ತೆಯಾಗಿದೆ. ಈ ಬಗ್ಗೆ ಚಾಲಕ ಸರಿಯಾಗಿ ಮಾಹಿತಿ ನೀಡದ ಕಾರಣ ಆತನಿಗೆ ಸ್ಥಳೀಯರು ಥಳಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ಚಾಲಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗೋಕಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.