ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 518.4 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿರುವ ಅಬಕಾರಿ ಇಲಾಖೆ ಪೊಲೀಸರು, ಇಬ್ಬರನ್ನು ಬಂಧಿಸಿ ಮದ್ಯ ಸಾಗಾಟಕ್ಕೆ ಬಳಸಿದ್ದ ವಾಹನ ಜಪ್ತಿ ಮಾಡಿದ್ದಾರೆ.
ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಚೆಕ್ಪೋಸ್ಟ್ನಲ್ಲಿ ವಾಹನದ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯದ 60 ಪೆಟ್ಟಿಗೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದ ಬೀಡ್ ತಾಲೂಕಿನ ತೋರಟವಾಡಿ ಗ್ರಾಮದ ರಾಮ ಕಚ್ರು ಕರಾಂಡೆ, ಕಿರಣ ಕಚ್ರು ಕರಾಂಡೆ ಬಂಧಿತ ಆರೋಪಿಗಳಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ 11 ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಜಯರಾಮೇಗೌಡ ತಿಳಿಸಿದರು.
ಅಬಕಾರಿ ಜಂಟಿ ಆಯುಕ್ತ ಡಾ. ವೈ. ಮಂಜುನಾಥ್, ಅಧಿಕಾರಿಗಳಾದ ಆರ್.ಜಿ. ಹೊಸಳ್ಳಿ, ಸಿ.ಎಸ್. ಪಾಟೀಲ, ಎಂ.ಸಿ. ಗಲಗಲಿ ಕಾರ್ಯಾಚರಣೆ ನಡೆಸಿದರು.