ಬೆಳಗಾವಿ: ಕುಂದಗೋಳ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಪಕ್ಷದ ಶಿಸ್ತಿನ ಶಿಪಾಯಿಯಾಗಿ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ತಿಳಿಸಿದ್ದಾರೆ.
ಕೃಷ್ಣಾ ನದಿ ನೀರು ಹಂಚಿಕೆ ಸಮಸ್ಯೆ ಪರಿಹಾರಕ್ಕಾಗಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಕುಂದಗೋಳ ಚುನಾವಣೆ ವಿಷಯದಲ್ಲಿ ಪಕ್ಷ ನನ್ನನ್ನು ಕೆಲಸ ಮಾಡಲು ಕಳುಹಿಸಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುವೆ, ಸೋಲು-ಗೆಲುವಿನ ಬಗ್ಗೆ ಮುಂದೆ ನೋಡೋಣ ಎಂದರು.
ಬೆಳಗಾವಿ ರಾಜಕಾರಣ ಕುರಿತು ಪ್ರತಿಕ್ರಿಯೆಗೆ ನಕಾರ:
ಬೆಳಗಾವಿ ಕಾಂಗ್ರೆಸ್ ಬಿಕ್ಕಟ್ಟಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಲು ನಿರಾಕರಿಸಿದರು. ರೆಬಲ್ ಶಾಸಕರು ಸಭೆಗೆ ಹಾಜರಾಗದ್ದರ ಬಗ್ಗೆಯೂ ಯಾವುದೇ ಅಭಿಪ್ರಾಯ ತಿಳಿಸಲಿಲ್ಲ.