ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಪಾಯ ಮಟ್ಟ ಮೀರಿ ಘಟಪ್ರಭಾ ನದಿ ನೀರು ಹರಿಯುತ್ತಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಸದ್ಯ ಡ್ಯಾಂ ಶೇಕಡಾ 95 ರಷ್ಟು ತುಂಬಿದೆ.
ಜಲಾಶಯದಿಂದ ನೀರು ಬಿಡುಗಡೆ ಪ್ರಮಾಣ 21,000 ಕ್ಯೂಸೆಕ್ನಿಂದ 40 ಸಾವಿರ ಕ್ಯೂಸೆಕ್ಗೆ ವಿಸ್ತರಣೆ ಮಾಡಲಾಗಿದೆ. ಒಂದು ವೇಳೆ ನೀರಿನ ಒಳ ಹರಿವಿನಲ್ಲಿ ಹೆಚ್ಚಾದರೆ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಇಂದು ಸಂಜೆಯಿಂದ ಜಲಾಶಯದಿಂದ ಘಟಪ್ರಭಾ ನದಿಗೆ 40 ಸಾವಿರ ನೀರು ಬಿಡುವುದಾಗಿ ಜಲಾಶಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟಪ್ರಭಾ ಹಾಗೂ ಹಿರಣ್ಯಕೇಶಿ ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.