ಚಿಕ್ಕೋಡಿ(ಬೆಳಗಾವಿ) : ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದಿಢೀರ್ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದಾಗಿ ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಧೂದ್‌ಗಂಗಾ ನದಿಯ ಒಳಹರಿವಿನ ಪ್ರಮಾಣ ಹೆಚ್ಚಳವಾದ ಪರಿಣಾಮ ಕಾರದಗಾ, ಭೋಜ ಗ್ರಾಮಗಳ ನಡುವಿನ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಭಾರಿ ಮಳೆಗೆ ಒಂದೇ ರಾತ್ರಿಯಲ್ಲಿ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಯ ನೀರಿನ ಪ್ರಮಾಣ 3 ರಿಂದ 4 ಅಡಿ ಹೆಚ್ಚಳವಾಗಿದೆ. ಜೊತೆಗೆ ಧೂದ್‌ಗಂಗಾ, ವೇದಗಂಗಾ, ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿದೆ. ನದಿ ತೀರದ ಗ್ರಾಮಸ್ಥರಲ್ಲಿ ಇದರಿಂದಾಗಿ ಮತ್ತೆ ಆತಂಕ ಮನೆ ಮಾಡಿದೆ.