ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಗೆ ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿದ್ದು, ಇದೀಗ ಈರುಳ್ಳಿ ಬೆಲೆ ಗಗನಕ್ಕೇರಿದೆ.
ಚಿಕ್ಕೋಡಿ ತಾಲೂಕಿಗೆ ಪಕ್ಕದ ಮಹಾರಾಷ್ಟ್ರದಿಂದ ಈರುಳ್ಳಿ ಸರಬರಾಜು ಆಗದ ಹಿನ್ನೆಲೆ, ಬೆಲೆಯಲ್ಲಿ ಏರಿಕೆ ಕಂಡಿದೆ. ದಿಢೀರ್ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.
ಇನ್ನೂ ಕೆಲವು ದಿನಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 150 ರೂಪಾಯಿ ಆಗುವ ಸಾಧ್ಯತೆಯಿದೆ ಎನ್ನುತ್ತಾರೆ ಮಾರಾಟಗಾರರು.