ETV Bharat / state

ನಾಲ್ಕು ಕ್ಷೇತ್ರಗಳಲ್ಲಿ ಭಾರತ ಅಗ್ರಸ್ಥಾನಕ್ಕೆ ಏರುವ ಅವಶ್ಯಕತೆಯಿದೆ: ಸಚಿವ ಸತೀಶ್ ಜಾರಕಿಹೊಳಿ

author img

By ETV Bharat Karnataka Team

Published : Sep 5, 2023, 6:24 PM IST

ರಾಜ್ಯದಲ್ಲಿ ಶೈಕ್ಷಣಿಕ ವ್ಯವಸ್ಥೆ ಮೇಲ್ದರ್ಜೆಗೇರಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಸಚಿವ ಸತೀಶ ಜಾರಕಿಹೊಳಿ
ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ : ಶಿಕ್ಷಣ, ಅರಣ್ಯ, ಪರಿಸರ ಮತ್ತು ಕ್ರೀಡೆಯಲ್ಲಿ ಟಾಪ್ ಇದ್ದರೆ ದೇಶವೂ ಟಾಪ್ ಇರುತ್ತದೆ. ಆದರೆ, ಇವುಗಳನ್ನು ಬಹಳ ಕಡಿಮೆ ಸ್ಥರದಲ್ಲಿ ಇಟ್ಟಿದ್ದೇವೆ. ಹಾಗಾಗಿ ಈ ನಾಲ್ಕು ಕ್ಷೇತ್ರಗಳಲ್ಲಿ ಭಾರತ ಅಗ್ರಸ್ಥಾನಕ್ಕೆ ಏರುವ ಅವಶ್ಯಕತೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಗಾಂಧಿ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶೈಕ್ಷಣಿಕ ವ್ಯವಸ್ಥೆ ಮೇಲ್ದರ್ಜೆಗೇರಿಸಬೇಕು. ತಮ್ಮ ಬಳಿ ಕಲಿತ ವಿದ್ಯಾರ್ಥಿಗಳ ಪೈಕಿ ಎಷ್ಟು ಮಂದಿ ಉನ್ನತ ಸ್ಥಾ‌ನ ಪಡೆದಿದ್ದಾರೆ, ಎಂಬ ಬಗ್ಗೆ ಶಿಕ್ಷಕರು ಇಂದಿನ ಮಕ್ಕಳಿಗೆ ತಿಳಿಸಬೇಕು. ಇದರಿಂದ ಅವರೂ‌ ಉತ್ತಮ ಸಾಧನೆ ಮಾಡಲು ಪ್ರೇರಣೆಯಾಗುತ್ತದೆ. ನಮಗೆ ಇತಿಹಾಸದ ಬಗ್ಗೆ ಪ್ರಜ್ಞೆ ಇರಬೇಕು. ಬುದ್ಧ, ಬಸವಣ್ಣ, ಅಂಬೇಡ್ಕರ್, ಶಾಹು ಮಹಾರಾಜರು, ಸಾವಿತ್ರಿ - ಜ್ಯೋತಿಬಾ ಫುಲೆ ದಂಪತಿಗಳು ಸೇರಿ ಮತ್ತಿತರ ಮಹನೀಯರ ಕೊಡುಗೆಗಳನ್ನು ಸ್ಮರಿಸಬೇಕು. ಅವರ ಹೋರಾಟದ ಹಾದಿಯನ್ನು ಮಕ್ಕಳಿಗೂ ತಿಳಿಸಿಕೊಡಬೇಕೆಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ

ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿನ ಕಾಲುಸಂಕಗಳು ಹಾಳಾಗಿ, ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಲು ತೊಂದರೆಯಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 35 ಕೋಟಿ ಅನುದಾನದಲ್ಲಿ 350 ಕಡೆ ಚಿಕ್ಕಸೇತುವೆ ನಿರ್ಮಿಸುತ್ತಿದ್ದೇವೆ ಎಂದು ಸತೀಶ ಜಾರಕಿಹೊಳಿ ತಿಳಿಸಿದರು.

ಬೇರೆ ದೇಶಗಳಲ್ಲಿ ಶಿಕ್ಷಣ ನೀಡಬೇಕು ಎನ್ನುವ ಏಕೈಕ ಉದ್ದೇಶಿಂದಲೇ ಶಾಲೆಗಳನ್ನು ತೆರೆಯಲಾಗುತ್ತದೆ. ಆದರೆ, ನಮ್ಮಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಶಾಲೆಗಳನ್ನು ತೆರೆಯಲಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವುದರಿಂದ ಕೆಲವೆಡೆ ಸರ್ಕಾರಿ ಶಾಲೆ ಮುಚ್ಚಲಾಗುತ್ತಿದೆ. ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಪ್ರಸ್ತುತ ದಿನಗಳಲ್ಲಿ ಶಿಕ್ಷಕರ ಸಮಸ್ಯೆಗಳ ಜತೆಗೆ, ಶೈಕ್ಷಣಿಕ ವ್ಯವಸ್ಥೆಯಲ್ಲಿರುವ ಸಮಸ್ಯೆಗಳ ಬಗ್ಗೆಯೂ ವಿಸ್ತೃತವಾಗಿ ಚರ್ಚೆ ಆಗಬೇಕು ಎಂದು ಸತೀಶ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದರು.

ಇಂದು ದೆಹಲಿ ಸರ್ಕಾರಿ ಶಾಲೆಗಳು ದೇಶದಲ್ಲೇ ಮಾದರಿಯಾಗಿವೆ. ಆದರೆ, ನಮ್ಮ ಸರ್ಕಾರಿ ಶಾಲೆಗಳಲ್ಲಿ ಕಲಿತ ಮಕ್ಕಳು ಖಾಸಗಿ ಶಾಲೆ ಮಕ್ಕಳೊಂದಿಗೆ ಪೈಪೋಟಿ ನಡೆಸಲು ಆಗುತ್ತಿಲ್ಲ. ಹಾಗಾಗಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವತ್ತ ಶಿಕ್ಷಕರು ಗಮನ ಹರಿಸಬೇಕು. ಹಲವು ಶಾಲೆಗಳಲ್ಲಿ ದುರಸ್ತಿ ಕಾಮಗಾರಿ ನಡೆಯಬೇಕು. ಸಕಾಲಕ್ಕೆ ಅತಿಥಿ ಶಿಕ್ಷಕರ ನೇಮಕಾತಿ ಆಗಬೇಕು. ಸರ್ಕಾರ ಈ ಬಗ್ಗೆ ಚಿಂತನೆ ನಡೆಸಬೇಕು ಎಂದರು.

ಉದಯನಿಧಿ ಸ್ಟಾಲಿನ್‌ ಹೇಳಿಕೆ ವಿಚಾರ : ಕಾರ್ಯಕ್ರಮದ ಬಳಿಕ ಉದಯನಿಧಿ ಸ್ಟಾಲಿನ್‌ ಹೇಳಿಕೆ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿದ ಸತೀಶ್​​ ಜಾರಕಿಹೊಳಿ ಯಾವುದೇ ವಿವಾದ ಸೃಷ್ಟಿಯಾದಾಗ, ಪರ – ವಿರೋಧವಾಗಿ ಮಾತನಾಡುವ ಎರಡು ತಂಡಗಳು ಇದ್ದೇ ಇರುತ್ತವೆ. ಏನೋ ಮಾತನಾಡಿರುತ್ತಾರೆ. ಆದರೆ, ಇನ್ನೇನೋ ಅನಾಹುತವಾಗುತ್ತದೆ. ಉದಯನಿಧಿ ಸ್ಟಾಲಿನ್‌ ಮಾತಾಡಿರುವುದು ತಮಿಳು ಭಾಷೆಯಲ್ಲಿ. ಆ ಭಾಷೆ ನನಗೆ ಅರ್ಥ ಆಗುವುದಿಲ್ಲ. ಅವರ ಭಾಷಣವನ್ನು ಕನ್ನಡಕ್ಕೆ ಅನುವಾದಿಸಿದ ಬಳಿಕ, ಅವರು ಏನು ಮಾತನಾಡಿದ್ದಾರೆ ಅಂತಾ ಗೊತ್ತಾಗುತ್ತದೆ ಎಂದು ನುಡಿದರು.

ದೇಶಕ್ಕೆ ರಿಪಬ್ಲಿಕ್‌ ಆಫ್‌ ಭಾರತ ಎಂದು ಕೇಂದ್ರ ಸರ್ಕಾರ ಮರುನಾಮಕರಣ ಮಾಡಲು ಮುಂದಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮೊದಲಿನಿಂದಲೂ ಭಾರತ ದೇಶ ಎಂದು ಕರೆಯಲಾಗುತ್ತದೆ. ಇದರಲ್ಲಿ ಏನೂ ಹೊಸದಿಲ್ಲ. ದೇಶದ ಹೊರಗೆ ಹೋದಾಗ, ಇಂಡಿಯಾ, ನಮ್ಮ ದೇಶದಲ್ಲಿ ಭಾರತ ಎಂದೇ ಕರೆಯುತ್ತೇವೆ. ಭರತ ಹೆಸರಿನಿಂದ ದೇಶಕ್ಕೆ ಭಾರತ ಬಂದಿದೆ ಎಂಬ ಇತಿಹಾಸ ಇದೆ. ಆದರೆ, ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ಈ ರೀತಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ, ಅವರಿಗೆ ಲಾಭವಾಗಬಾರದು ಎಂದು ಸತೀಶ ಜಾರಕಿಹೊಳಿ ಕುಟುಕಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವಿಚಾರಕ್ಕೆ, ನಾನು ರಾಜೀನಾಮೆ ಕೊಡಲು ಸಿದ್ಧನಿದ್ದೇನೆ. ನನ್ನನ್ನು ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಎರಡು ತಿಂಗಳ ಹಿಂದೆಯೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ. ಮಂತ್ರಿಯಾದ ಮೇಲೆ ಕೆಲಸದ ಒತ್ತಡ ಹೆಚ್ಚಿದೆ. ಆದ್ದರಿಂದ ಹೊಸಬರಿಗೆ ಅವಕಾಶ ನೀಡಿದರೆ ಒಳ್ಳೆಯದು ಎಂದು ಹೇಳಿದರು.

ಸತೀಶ ಜಾರಕಿಹೊಳಿ ಮಾಸ್ಟರ್ ಮೈಂಡ್- ಲಕ್ಷ್ಮಿ ಹೆಬ್ಬಾಳ್ಕರ್ : ದೇಶ ಕಟ್ಟಲು ಶಿಕ್ಷಣ, ಅರಣ್ಯ, ಪರಿಸರ ಮತ್ತು ಕ್ರೀಡೆ ಈ ನಾಲ್ಕು ಕ್ಷೇತ್ರಗಳಲ್ಲಿ ಅಗ್ರಸ್ಥಾನದಲ್ಲಿ ಇರುವಂತೆ ಸತೀಶ ಜಾರಕಿಹೊಳಿ ಅವರು ತುಂಬಾ ಅರ್ಥಗರ್ಭಿತವಾವಿ ಮಾತಾಡಿದ್ದಾರೆ. ಅವರಿಗೆ ಶಿಕ್ಷಣದ ಬಗ್ಗೆ ಅತಿಯಾದ ಆತ್ಮೀಯತೆ ಇದೆ. ಹಾಗಾಗಿ ಅವರಿಗೆ ನಾವೆಲ್ಲಾ ಬುದ್ಧಿವಂತರು, ಮಾಸ್ಟರ್ ಮೈಂಡ್ ಎಂದೆಲ್ಲಾ ಕರೆಯುತ್ತೇವೆ ಎನ್ನುವ ಮೂಲಕ ವೇದಿಕೆ ಮೇಲೆಯೇ ಸತೀಶ ಜಾರಕಿಹೊಳಿ ಅವರನ್ನು ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘಿಸಿದರು.

ಇದನ್ನೂ ಓದಿ : ವಿದ್ಯೆ ಕಲಿಸುವುದಷ್ಟೇ ಶಿಕ್ಷಣದ ಉದ್ದೇಶ ಅಲ್ಲ, ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದು ಶಿಕ್ಷಣದ ಗುರಿ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.