ETV Bharat / state

ಭಾರತ - ಪಾಕಿಸ್ತಾ‌ನ ಪಂದ್ಯ: ಭಾರತದ ಗೆಲುವಿಗೆ ಕ್ರಿಕೆಟ್​ ಅಭಿಮಾನಿಗಳಿಂದ ವಿಶೇಷ ಪೂಜೆ - ಭಾರತ ಮತ್ತು ಪಾಕಿಸ್ತಾನ

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್​ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಲಿ ಎಂದು ಬೆಳಗಾವಿ, ಹುಬ್ಬಳ್ಳಿಯಲ್ಲಿ ಕ್ರಿಕೆಟ್​ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.

india-pakistan-match-special-worship-from-cricket-fans-for-indias-victory
ಹುಬ್ಬಳ್ಳಿಯಲ್ಲಿ ಭಾರತದ ಗೆಲುವಿಗೆ ವಿಶೇಷ ಪೂಜೆ
author img

By ETV Bharat Karnataka Team

Published : Oct 14, 2023, 12:57 PM IST

ಭಾರತ - ಪಾಕಿಸ್ತಾ‌ನ ಪಂದ್ಯ: ಭಾರತದ ಗೆಲುವಿಗೆ ಕ್ರಿಕೆಟ್​ ಅಭಿಮಾನಿಗಳಿಂದ ವಿಶೇಷ ಪೂಜೆ

ಬೆಳಗಾವಿ : ಭಾರತ ಮತ್ತು ಪಾಕಿಸ್ತಾನ ನಡುವಣ ವಿಶ್ವಕಪ್​ ಪಂದ್ಯದಲ್ಲಿ ಭಾರತ ತಂಡವು ದಿಗ್ವಿಜಯ ಸಾಧಿಸಲಿ ಎಂದು ಬೆಳಗಾವಿಯಲ್ಲಿ ಕ್ರಿಕೆಟ್ ಅಭಿಮಾನಿಗಳು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಗರದ ರಾಣಿ ಚನ್ನಮ್ಮ ವೃತ್ತದ ಬಳಿ ಇರುವ ಗಣಪತಿ ಮಂದಿರದಲ್ಲಿ ಕ್ರಿಕೆಟ್​ ಪ್ರೇಮಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಕಳೆದ 31 ವರ್ಷಗಳಲ್ಲಿ ನಡೆದ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ- ಪಾಕಿಸ್ತಾನ ಏಳು ಬಾರಿ ಮುಖಾಮುಖಿಯಾಗಿದೆ. ಏಳು ಪಂದ್ಯಗಳಲ್ಲೂ ಭಾರತವೇ ಗೆಲುವು ಸಾಧಿಸಿದೆ. ಹಾಗಾಗಿ, 8ನೇ ಬಾರಿಯೂ ಭಾರತ ತಂಡ ಗೆಲ್ಲಲಿ ಎಂದು ಬೇಡಿಕೊಂಡರು.

ಈ ವೇಳೆ ಮಾತನಾಡಿದ ಕ್ರೀಡಾ ಅಭಿಮಾನಿ ಮಹಾಂತೇಶ ವಕ್ಕುಂದ, 2023ರ ವಿಶ್ವಕಪ್ ಟೂರ್ನಿಯ ರೋಚಕ ಪಂದ್ಯ ಇದಾಗಿದೆ. ಗುಜರಾತ್​ನ ನರೇಂದ್ರ ಮೋದಿ ಕ್ರೀಡಾಂಗಣ ಭಾರತ ಮತ್ತು ಪಾಕಿಸ್ತಾನ ನಡುವಿನ ಐತಿಹಾಸಿಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಇಡೀ ದೇಶವೇ ಪಂದ್ಯ ವೀಕ್ಷಿಸಲು ತುದಿಗಾಲಲ್ಲಿ ನಿಂತಿದೆ. ಈ ಹಿಂದಿನ ವಿಶ್ವಕಪ್​ಗಳಲ್ಲಿ ​ಪಾಕಿಸ್ತಾನ ವಿರುದ್ಧ ಭಾರತ ಸೋತ ಇತಿಹಾಸ ಇಲ್ಲ. ಹಾಗಾಗಿ, ಈ ಬಾರಿಯೂ ಭಾರತ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ವಿಶ್ವಕಪ್ ಗೆಲ್ಲುತ್ತದೆ ಇಲ್ಲವೋ ಅದು ಬೇರೆ ವಿಚಾರ ಆದರೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಾತ್ರ ನಮ್ಮ ಭಾರತ ತಂಡ ಗೆಲ್ಲಬೇಕು ಎಂದು ಎಂದು ಹೇಳಿದರು.

ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್​ ಪಂದ್ಯ ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಸಂಬಂಧ ಬೆಳಗಾವಿಯಲ್ಲಿ ಅಭಿಮಾನಿಗಳು ಭಾರತದ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದರು.

ನಗರದ ಸಾಯಿ ಬಾಬಾ ಮಂದಿರದಲ್ಲಿ ಪೂಜೆ ಸಲ್ಲಿಸಿದ ಕ್ರಿಕೆಟ್​ ಅಭಿಮಾನಿಗಳು

ಹುಬ್ಬಳ್ಳಿಯಲ್ಲಿ ಸಾಯಿಬಾಬಾಗೆ ವಿಶೇಷ ಪೂಜೆ : ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಹಿನ್ನೆಲೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಭಾರತದ ಗೆಲುವಿಗೆ ವಿಶೇಷ ಪೂಜೆ ನಡೆಸಲಾಯಿತು. ನಗರದ ಸಾಯಿ ಬಾಬಾ ಮಂದಿರದಲ್ಲಿ ಪೂಜೆ ಸಲ್ಲಿಸಿದ ಕ್ರಿಕೆಟ್​ ಅಭಿಮಾನಿಗಳು, ಭಾರತ ತಂಡಕ್ಕೆ ಶುಭ ಹಾರೈಸಿದರು. ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ವತಿಯಿಂದ ಸಾಯಿ ಬಾಬಾಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಕ್ರಿಕೆಟ್​ ಅಭಿಮಾನಿಗಳು ಭಾರತ ಮಾತಾ ಕೀ ಜೈ ಎಂದು ಘೋಷಣೆ ಕೂಗಿ ಹರ್ಷೋದ್ಘಾರ ವ್ಯಕ್ತಪಡಿಸಿದರು. ಜೊತೆಗೆ ಪಾಕಿಸ್ತಾನದ ಪಂದ್ಯದ ಜೊತೆಗೆ ಈ ಬಾರಿ ವಿಶ್ವಕಪ್ ಕೂಡ ಗೆಲ್ಲಲಿ ಎಂದು ಹಾರೈಸಿದರು.

ಇದನ್ನೂ ಓದಿ : ಭಾರತ ಪಾಕಿಸ್ತಾನ ಪಂದ್ಯ: ಅಹಮದಾಬಾದ್‌ ತಲುಪಿದ ಸಚಿನ್​ ತೆಂಡೂಲ್ಕರ್, ಅನುಷ್ಕಾ ಶರ್ಮಾ, ಅರಿಜಿತ್ ಸಿಂಗ್​ - ವಿಡಿಯೋ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.