ETV Bharat / state

ಬೆಳಗಾವಿಯಲ್ಲಿ ಒಂದೆಡೆ ರಾಜಕೀಯ ಪಕ್ಷಗಳ ಪ್ರತಿಭಟನೆ: ಮತ್ತೊಂದೆಡೆ ಶಿಕ್ಷಕರ ಹೋರಾಟ - undefined

ಇಂದು ಜಿಲ್ಲೆಯಾದ್ಯಂತ ಪ್ರತಿಭಟನೆಯದ್ದೇ ಸುದ್ದಿ. ಒಂದೆಡೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷಗಳು ಪರಸ್ಪರ ವಿರುದ್ಧ ಪ್ರತಿಭಟನೆ ನಡೆಸಿದವು.

ಪ್ರತಿಭಟನೆ
author img

By

Published : Jul 9, 2019, 8:40 PM IST

ಚಿಕ್ಕೋಡಿ/ ಬೆಳಗಾವಿ: ರಾಜ್ಯದ ಮೈತ್ರಿ ಸರ್ಕಾರದ ನಡೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಬಸವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ, ಮೈತ್ರಿ‌ ಸರ್ಕಾರದ ವಿರುದ್ಧ ಹರಿಹಾಯ್ದರು. ಅದೇ ರೀತಿ ಮೈತ್ರಿ ಸರ್ಕಾರ ಅಸ್ಥಿರತೆಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಹಾಗೂ ಮಹಾನಗರ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ಬೆಳಗಾವಿಯಲ್ಲಿ ಪ್ರತಿಭಟನೆ

ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯುದ್ದಕ್ಕೂ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿದವು. ನಂತರ ಸಿಎಂ, ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪ್ರಜಾತಂತ್ರವನ್ನು ಗೌರವಿಸಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಇನ್ನೊಂದೆಡೆ, ಸಂಗೊಳ್ಳಿ ರಾಯಣ್ಣ ವೃತ್ತದ ಕಾಂಗ್ರೆಸ್ ಕಚೇರಿ ಎದುರು ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್​ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಘೋಷಣೆ ಕೂಗಿದರು. ನಮ್ಮ ಶಾಸಕರನ್ನು ಬಿಜೆಪಿ‌ ನಾಯಕರು ಖರೀದಿಸಿ, ರಾಜೀನಾಮೆ ಕೊಡಿಸಿದ್ದಾರೆ ಎಂದು ಆರೋಪಿಸಿದರು.

ಶಿಕ್ಷಕರಿಂದಲೂ ಪ್ರತಿಭಟನೆ

ಅತ್ತ ರಾಜಕೀಯ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಶಿಕ್ಷಕರು ಪ್ರತಿಭಟನೆ ನಡೆಸಿದರು. ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿ ಸಭೆ ನಡೆಸಿದ ಶಿಕ್ಷಕರು, ನಂತರ ಬಸವ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನ್ಯಾಯ ಒದಗಿಸುವಂತೆ ಕೇಳಿಕೊಂಡರು.

Intro:ವಿವಿಧ ಬೇಡಿಕೆ ಈಡೇರಿಸುವಂತೆ ಶಿಕ್ಷಕರಿಂದ ಪ್ರತಿಭಟನೆ
Body:
ಚಿಕ್ಕೋಡಿ :

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು ಬೆಳಗಾವಿ ಜಿಲ್ಲೆ ವಿವಿಧ ತಾಲೂಕಿನ ಶಿಕ್ಷಕರು ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿದರು.

ಚಿಕ್ಕೋಡಿ ಪಟ್ಟಣದ ಬಿಇಓ ಕಚೇರಿ ಆವರಣದಲ್ಲಿ ಸಭೆ ನಡೆಸಿದ ಶಿಕ್ಷಕರು. ನಂತರ ಬಸವ ವೃತ್ತದ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ನ್ಯಾಯ ಒದಗಿಸುವಂತೆ ಕೇಳಿಕೊಂಡರು. ಸುಮಾರು ಎರಡು ಸಾವಿರಕ್ಕಿಂತ ಹೆಚ್ಚು ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ಬಸವ ವೃತ್ತದಲ್ಲಿ ದೊಡ್ಡ ಮಟ್ಟದಲ್ಲಿ ಟ್ರಾಪಿಕ್ ಸಮಸ್ಯೆಯಾಗಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು.

ಚಿಕ್ಕೋಡಿ ಎಸಿ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ ಶಿಕ್ಷಕರು. ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನ ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೇತನ ಶ್ರೇಣಿ ನಿಗಧಿ ಮಾಡಬೇಕು. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನೆ ಮುಂದುವರೆಸಬೇಕು. ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಹಾಗೂ ಯುಕೆಜಿ ಪ್ರಾರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿನ ನ್ಯೂನ್ಯತೆ ಸರಿಪಡಿಸಬೇಕು ಹಾಗೂ ಹೊಸ ಖಾಸಗಿ ಶಾಲೆಗಳನ್ನು ತೆಗೆಯಲು ಅನುಮತಿ ನೀಡಬಾರದೆಂದು ಆಗ್ರಹಿಸಿದರು.

ಕಳೆದ ಮೂರು ವರ್ಷಗಳಿಂದ ಶಿಕ್ಷಕರು ವರ್ಗಾವಣೆ ಆಗದೇ ಇರುವುದರಿಂದ ಈಗ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು ಈ ಪ್ರಕ್ರಿಯೆ ಮುಗಿದ ತಕ್ಷಣ ಮತ್ತೊಮ್ಮೆ ಅಕ್ಟೋಬರ್ ನಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಸಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಎಲ್ಲ ಸೇವಾ ಸೌಲಭ್ಯ ನೀಡಬೇಕೆಂದು ಚಿಕ್ಕೋಡಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೆ.ಎಮ್. ಹೀರೆಮಠ ಸರ್ಕಾರಕ್ಕೆ ಒತ್ತಾಯಿಸಿದರು.

ಬೈಟ್ 1 : ಜೆ.ಎಮ್. ಹೀರೆಮಠ (ಚಿಕ್ಕೋಡಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ)

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.