ETV Bharat / state

ನ. 1ರೊಳಗೆ ಚಿಕ್ಕೋಡಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡುವಂತೆ ಒತ್ತಾಯ - ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ

ನವೆಂಬರ್​​ 1ರ ಒಳಗಾಗಿ ಚಿಕ್ಕೋಡಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.

ಚಿಕ್ಕೋಡಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡುವಂತೆ ಒತ್ತಾಯ
author img

By

Published : Oct 13, 2019, 9:03 PM IST

ಚಿಕ್ಕೋಡಿ/ಬೆಳಗಾವಿ: ನವೆಂಬರ್​​ 1ರ ಕನ್ನಡ ರಾಜ್ಯೋತ್ಸವ ದಿನದ ಒಳಗಾಗಿ ಚಿಕ್ಕೋಡಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡದಿದ್ದರೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಬರುವಂತ ಪ್ರತಿ ಪಂಚಾಯ್ತಿ ಹಾಗೂ ಗ್ರಾಮದ ಜನ ಸೇರಿ ಪಾದಯಾತ್ರೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದರು. ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆ ಮಾಡಲು ಮುಂದಾಗಿ ಎಂದು ಆಗ್ರಹಿಸಿದರು.

ಚಿಕ್ಕೋಡಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡುವಂತೆ ಒತ್ತಾಯ

ಒಂದು ವೇಳೆ ಜಿಲ್ಲೆ ಮಾಡದೆ ಇದ್ದರೆ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕಾಗುತ್ತದೆ. ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕರ್ನಾಟಕದಲ್ಲೂ ಹೋರಾಟ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ನೇರವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು.

Intro:ನವೆಂಬರ 1 ರ ಒಳಗಾಗಿ ಚಿಕ್ಕೋಡಿ ಜಿಲ್ಲೆಯಾಗಿ ಘೋಷಣೆ ಮಾಡಿ : ಬಿ.ಆರ್.ಸಂಗಪ್ಪಗೋಳ
Body:
ಚಿಕ್ಕೋಡಿ :

ನವೆಂಬರ 1 ರ ಒಳಗಾಗಿ ಚಿಕ್ಕೋಡಿ ಜಿಲ್ಲೆಯಾಗಿ ಘೋಷಣೆ ಮಾಡಬೇಕು ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕೋಡಿ ಪ್ರವಾಸ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡದೆ ಇದ್ದರೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಬರುವಂತ ಪ್ರತಿ ಪಂಚಾಯತಿ ಹಾಗೂ ಗ್ರಾಮದ ಜನ ಕೂಡಿ ಪಾದಯಾತ್ರೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದರು

ಚಿಕ್ಕೋಡಿ ಜಿಲ್ಲೆ‌ ಮಾಡಲು ಯಾರು ಅಡ್ಡಗಾಲು ಹಾಕುತ್ತಿದ್ದಾರೆ ಎನ್ನುವುದು ನಮ್ಮಗೆ ಗೊತ್ತು. ಅವರು ಸುಮ್ಮನೆ ಇದ್ದರೆ ಸರಿ. ಇಲ್ಲವಾದರೆ ಅವರ ಗುಟ್ಟು ರಟ್ಟು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆ ಮಾಡಲು ಮಂದಾಗಿ ಎಂದು ಕರೆ ನೀಡಿದರು.

ಲೋಕಸಭಾ ಚುನಾವಣೆ ವೇಳೆ ಲೋಕಸಭಾ ಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಜಿಲ್ಲೆ ಮಾಡುವುದಾಗಿ ಭರವಸೆ ನೀಡಿದ್ದರು. ಅದಕ್ಕೆ ಜೊಲ್ಲೆ ಅವರು ಚಿಕ್ಕೋಡಿ ಜಿಲ್ಲೆಯನ್ನು ಮಾಡಿ ಕೊಟ್ಟ ಮಾತು ಉಳಿಸಿಕೊಳ್ಳಿ ಒಂದು ವೇಳೆ ಜಿಲ್ಲೆ ಮಾಡದೆ ಇದ್ದರೆ ಉತ್ತರ ಕರ್ನಾಟಕ ಪ್ರತೇಕ ರಾಜ್ಯ ಮಾಡಬೇಕಾಗುತ್ತದೆ. ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕರ್ನಾಟಕದಲ್ಲೂ ಹೋರಾಟ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ನೇರವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.