ಅಥಣಿ (ಬೆಳಗಾವಿ): ಗಡಿ ಪ್ರದೇಶದಲ್ಲಿರುವ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿಯಮಿತವಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕು ಹಾಗೂ ಮೂಲಸೌಕರ್ಯಗಳ ಕೊರತೆಗಳನ್ನು ಪಟ್ಟಿ ಮಾಡಿ ಸಲ್ಲಿಸುವಂತೆ ತಿಳಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ್ ತಿಳಿಸಿದ್ದಾರೆ.
ಗಡಿಭಾಗ ಅಥಣಿಯಲ್ಲಿ ಕನ್ನಡಪರ ಸಂಘಟನೆಗಳು, ಕನ್ನಡಪರ ಕೆಲಸ ಮಾಡುತ್ತಿರುವ ಸ್ವಾಮೀಜಿಗಳ ಸಮ್ಮುಖದಲ್ಲಿ ಗಡಿ ಸಮಸ್ಯೆಗಳ ಕುರಿತ ಸಮಾಲೋಚನಾ ಸಭೆಯಲ್ಲಿ ನಡೆಸಿ ಅವರು ಮಾತನಾಡಿ, ಗಡಿಪ್ರದೇಶದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.
ಗಡಿಪ್ರದೇಶದ ಜನರ ವಿವಿಧ ಬೇಡಿಕೆಗಳ ಬಗ್ಗೆ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಗಮನ ಸೆಳೆದರು. ಅಥಣಿ ನಗರದಲ್ಲಿ ಸರ್ಕಾರಿ ಕನ್ನಡ ಪ್ರೌಢಶಾಲೆ ಸ್ಥಾಪಿಸುವ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.
ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಹೇಳಿಕೆ ಖಂಡಿಸಿ ಕುಂದಾನಗರಿಯಲ್ಲಿ ಪ್ರತಿಭಟನೆ