ETV Bharat / state

ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪಿಸುವುದು ಕಾನೂನು ನಿಂದನೆಯಾಗಲಿದೆ: ಪೊಲೀಸ್ ಆಯುಕ್ತ

ಬೆಳಗಾವಿಯ ಪೀರನವಾಡಿ ಪ್ರದೇಶದಲ್ಲಿ ಅನುಮತಿ ಇಲ್ಲದೆ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಯಾವುದೇ ಅನುಮತಿ ಪಡೆಯದೆ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ ಕಾರಣ ತೆರವುಗಳಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್​​ ಆಯುಕ್ತ ತಿಳಿಸಿದ್ದಾರೆ.

Tyagarajan
ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್
author img

By

Published : Aug 15, 2020, 12:28 PM IST

ಬೆಳಗಾವಿ: ನಗರದ ಪೀರನವಾಡಿಯಲ್ಲಿ ಯಾವುದೇ ಅನುಮತಿ ಪಡೆಯದೆ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಕಾನೂನು ಪ್ರಕಾರ ನಾವು ತೆರವು ಮಾಡಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಸಮರ್ಥಿಸಿಕೊಂಡರು.

ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್

ಪ್ರಕರಣ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗ್ಗೆ 5.15ರ ಸುಮಾರಿಗೆ ಸಂಗೊಳ್ಳಿ ರಾಯಣ್ಣ ಮೂರ್ತಿಯ ಪ್ರತಿಷ್ಠಾಪನೆಗೆ ಕೆಲವರು ಮುಂದಾಗಿದ್ದರು. ಯಾವುದೇ ಮೂರ್ತಿ ಪ್ರತಿಷ್ಠಾಪಿಸಬೇಕಾದರೂ ಸಹ ಅನುಮತಿ ಪಡೆಯುವುದು ಅತ್ಯಗತ್ಯ ಎಂದು ಯುವಕರಿಗೆ ನಮ್ಮ ಸಿಬ್ಬಂದಿ ಮನವರಿಕೆ ಮಾಡಿದ್ದಾರೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದೆಂದು ಸುಪ್ರೀಂಕೋರ್ಟ್​ನಿಂದ ಗೈಡ್‌ಲೈನ್ಸ್ ಸಹ ಇದೆ. ಅನುಮತಿ ಇಲ್ಲದೇ ಮೂರ್ತಿ ಪ್ರತಿಷ್ಠಾಪಿಸಿದರೆ ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಹೇಳಿದರು.

ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ನಮ್ಮ ಅಭ್ಯಂತರವೇನಿಲ್ಲ. ಆದರೆ ಅನುಮತಿ ಪಡೆದು ಮೂರ್ತಿ ಪ್ರತಿಷ್ಠಾಪಿಸಿ, ಇಲ್ಲವಾದರೆ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದೇವೆ. ಈಗಾಗಲೇ ಮೂರ್ತಿ ಪ್ರತಿಷ್ಠಾಪನೆ ಮಾಡಲು ಯತ್ನಿಸಿದವರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ ಎಂದು ಕೆ.ತ್ಯಾಗರಾಜನ್ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.