ETV Bharat / state

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳಿ ಬಂಧನ

ಧಾರವಾಡದ ಮಹಿಳೆಯ ಕೊರಳಲ್ಲಿದ್ದ 40 ಗ್ರಾಂ ತೂಕದ ಮಂಗಳಸೂತ್ರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಕಳ್ಳಿಯನ್ನು ಸವದತ್ತಿ ಪೊಲೀಸರು ಬಂಧಿಸಿದ್ದಾರೆ.

interstate-woman-thief-arrested-by-savadatti-police
ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳಿ ಬಂಧನ
author img

By

Published : Oct 6, 2022, 4:27 PM IST

ಬೆಳಗಾವಿ: ಜಿಲ್ಲೆಯ ಸವದತ್ತಿಯ ಯಲ್ಲಮ್ಮನಗುಡ್ಡ ರೇಣುಕಾ ದೇವಸ್ಥಾನದ ಜಾತ್ರೆಯಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳಿಯನ್ನು ಸವದತ್ತಿ ಪೊಲೀಸರು ಬಂಧಿಸಿ, 40 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಬಂಧಿತ ಮಹಿಳೆಯ ಮೂಲವು ಮಹಾರಾಷ್ಟ್ರದ ಸೊಲ್ಲಾಪುರವಾಗಿದ್ದು, ಕಳೆದ ಸೆ.30ರಂದು ಧಾರವಾಡದ ಅನ್ನಪೂರ್ಣ ಸಂದಿಗವಾಡ ಎಂಬುವವರ ಕೊರಳಲ್ಲಿದ್ದ 40ಗ್ರಾಂ ತೂಕದ ಮಂಗಳಸೂತ್ರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಳು. ಈ ಬಗ್ಗೆ ಚಿನ್ನಾಭರಣ ಕಳೆದುಕೊಂಡ ಮಹಿಳೆಯು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಹೆಚ್ಚುವರಿ ಎಸ್ಪಿ ಮಹಾನಿಂಗ ನಂದಗಾಂವಿ, ಡಿಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಕರುಣೀಶಗೌಡ ಮಾರ್ಗದರ್ಶನದಲ್ಲಿ ಪಿಎಸ್ಐ ಮಲಕನಗೌಡ ಬಿರಾದರ ತಂಡವು ಆರೋಪಿಯನ್ನು ಬಂಧಿಸಿ, 40ಗ್ರಾಂ ತೂಕದ ಅಂದಾಜು 2 ಲಕ್ಷ ರೂ. ಬೆಲೆಬಾಳುವ ಬಂಗಾರದ ಮಂಗಳ ಸೂತ್ರವನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಮಹಿಳೆ ವಿರುದ್ಧ ವಿರುದ್ಧ ಸೊಲ್ಲಾಪುರ ರೈಲ್ವೆ ಪೊಲೀಸ್ ಠಾಣೆ, ಧಾರವಾಡ ರೈಲ್ವೆ ಪೊಲೀಸ್ ಠಾಣೆ, ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ತಲಾ ಎರಡು ಕಳ್ಳತನ ಪ್ರಕರಣ ದಾಖಲಾಗಿವೆ. ಇದಲ್ಲದೇ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ಒಂದು ಸುಲಿಗೆ ಪ್ರಕರಣದಲ್ಲಿ ಆರೋಪಿತಳು ಆಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನಸುಕಿನಲ್ಲಿ ಹಾಲು ಮೊಸರು ಕಳ್ಳತನ.. ಅದೇ ಅಂಗಡಿಗೆ ಮಾರಲು ಹೋದಾಗ ಸಿಕ್ಕಿಬಿದ್ದ ಚಾಲಾಕಿ ಕಳ್ಳ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.