ETV Bharat / state

ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದ ಈರಣ್ಣಾ ಕಡಾಡಿ

ಬೆಳಗಾವಿ ಜಿಲ್ಲೆಗೆ ವಿಶೇಷವಾಗಿರುವ ಸ್ಥಾನಮಾನವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡಿವೆ. ನಾವೆಲ್ಲರೂ ಸಹ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸುತ್ತೇವೆಂದು ಈರಣ್ಣಾ ಕಡಾಡಿ ಹೇಳಿದರು.

Iranna Kadaadi takes Blessing by Chandrasekhar Shivacharya Swamiji
ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯ ಆಶೀರ್ವಾದ ಪಡೆದ ಈರಣ್ಣಾ ಕಡಾಡಿ
author img

By

Published : Jun 16, 2020, 7:10 PM IST

ಬೆಳಗಾವಿ: ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಈರಣ್ಣಾ ಕಡಾಡಿ ನಗರದ ಲಕ್ಷ್ಮೀ ನಗರದ ಬಳಿಯ ಹುಕ್ಕೇರಿ ಹಿರೇಮಠದ ಶಾಖೆಗೆ ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದ ಈರಣ್ಣಾ ಕಡಾಡಿ

ಈ ವೇಳೆ ರಾಜ್ಯಸಭಾ ನೂತನ ಸದಸ್ಯ ಈರಣ್ಣಾ ಕಡಾಡಿ ಮಾತನಾಡಿ, ಬೆಳಗಾವಿ ಜಿಲ್ಲೆಗೆ ವಿಶೇಷವಾಗಿರುವ ಸ್ಥಾನಮಾನವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡಿವೆ. ನಾವೆಲ್ಲರೂ ಸಹ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸುತ್ತೇವೆ. ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡಿರುವುದು ಸಂತಸವಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಲು ಗುರುಗಳ ಮಾರ್ಗದರ್ಶನ ಹಾಗೂ ಆಶೀರ್ವಾದ ನಮ್ಮ ಮೇಲಿರಬೇಕು ಎಂದರು.

ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆ. ಎಲ್ಲರೂ ಕೂಡ ಶ್ರಮಿಸಿ ಒಗ್ಗಟ್ಟಾಗಿ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಪ್ರಮುಖ ಕಚೇರಿಗಳನ್ನು ಸ್ಥಳಾಂತರಿಸಬೇಕು. ಸುವರ್ಣ ಸೌಧದಲ್ಲಿ ನಿರಂತರ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು ಎಂದರು.

ಅಲ್ಲದೆ ಈ ನಿಟ್ಟಿನಲ್ಲಿ ಇಲ್ಲಿನ ಎಲ್ಲಾ ಜನಪ್ರತಿನಿಧಿಗಳು ಒಗ್ಗೂಡಿ ಕೆಲಸ ಮಾಡಬೇಕು. ಜೊತೆಗೆ ಸಮಗ್ರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವ ಮೂಲಕ ಜಿಲ್ಲೆಗೆ ಉತ್ತಮ ಹೆಸರನ್ನು ತರುವಲ್ಲಿ ಶ್ರಮಿಸಬೇಕು ಎಂದು ರಾಜ್ಯಸಭಾ ನೂತನ ಸದಸ್ಯ ಈರಣ್ಣಾ ಕಡಾಡಿಗೆ ಶ್ರೀಗಳು ಆಶೀರ್ವದಿಸಿದರು.

ಈ ವೇಳೆ ಅಲ್ಪಸಂಖ್ಯಾತ ನಿಗಮ ಮಂಡಳಿಯ ಅಧ್ಯಕ್ಷ ಮುಕ್ತಾರ ಹುಸೇನ್ ಪಠಾಣ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ,ರಾಜು ಚಿಕ್ಕನಗೌಡರ, ಮಹಾಂತೇಶ ಒಕ್ಕೂಂದ, ಸುರೇಶ ಯಾದವ್, ಈರಯ್ಯ ಕೋತ್, ಈರಣ್ಣಾ ಅಂಗಡಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.