ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಗೋಕಾಕ್ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟಾರೆ ಬಂಧಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಾಳೇಶ್ ಕಟ್ಟಿಕಾರ್(26) ಬಂಧಿತ ಆರೋಪಿ. ಆಗಸ್ಟ್ 07ರಂದು ನಡೆದಿದ್ದ ಪರೀಕ್ಷೆಯಲ್ಲಿ ಬಾಳೇಶ್, ಅಕ್ರಮಕ್ಕೆ ಸಹಕಾರ ನೀಡಿದ್ದ. ಇಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ಡಿವೈಸ್ ಗಳನ್ನು ತೆಗೆದುಕೊಂಡು ಹೋದ ಪರೀಕ್ಷಾ ಅಭ್ಯರ್ಥಿಗಳಿಗೆ ಉತ್ತರಗಳನ್ನು ಆತ ಹೇಳಿದ್ದಾಗಿ ತಿಳಿದು ಬಂದಿದೆ. ಮಂಜುನಾಥ್ ಮಾಳಿ ಮತ್ತು ಶ್ರೀಧರ್ ಕಟ್ಟಿಕಾರ್ ಅವರೊಂದಿಗೆ ಸೇರಿಕೊಂಡು ಬಾಳೇಶ್ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದಾನೆ.
ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ: ಮತದಾರರ ಮಾಹಿತಿ ಕಳವು ಹಗರಣದಲ್ಲಿ ಮೋದಿ ಸರ್ಕಾರವೂ ಭಾಗಿಯಾಗಿದೆ: ಸುರ್ಜೇವಾಲ