ಬೆಳಗಾವಿ: ಸ್ಥಳೀಯ ಸಮಸ್ಯೆಗಳು, ಆಸ್ಪತ್ರೆಗಳಿಗೆ ಸಿಬ್ಬಂದಿ ನೇಮಕ, ಆಸ್ಪತ್ರೆ ಸುಧಾರಣೆ, ಲಸಿಕೆ ವಿತರಣೆ ಸೇರಿ ಬ್ಲ್ಯಾಕ್ ಫಂಗಸ್ಗೆ ತಜ್ಞ ವೈದ್ಯರನ್ನು ನೇಮಿಸುವಂತೆ ಸಭೆಯಲ್ಲಿ ಸಿಎಂಗೆ ಸಲಹೆ ನೀಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಒಟ್ಟಾರೆ ಸಮಸ್ಯೆಗಳನ್ನು ಸರಿಪಡಿಸಲು ಸಲಹೆ,ಸೂಚನೆಗಳನ್ನು ನೀಡಲಾಗಿದ್ದು, ಅದರಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಳದ ಜೊತೆಗೆ ಬ್ಲ್ಯಾಕ್ ಫಂಗಸ್ ಹೆಚ್ಚಿನ ತಜ್ಞ ವೈದ್ಯರನ್ನು ನೇಮಿಸಬೇಕು ಎಂದು ಸಿಎಂಗೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ರಾಜ್ಯ ಸರ್ಕಾರಿಂದ ಈಗಾಗಲೇ ಕೆಲ ಪ್ಯಾಕೇಜ್ಗಳನ್ನು ಘೋಷಣೆ ಮಾಡಿರುವುದಾಗಿ ಸಿಎಂ ಬಿಎಸ್‌ವೈ ಹೇಳಿದ್ದಾರೆ. ಅವುಗಳು ಜನರಿಗೆ ತಲುಪಿದಾಗ ಮಾತ್ರ ನಮಗೆ ಸಮಾಧಾನ ಆಗಲಿದೆ. ಆದ್ರೆ, ಕಳೆದ ಸಲ ಘೋಷಣೆ ಮಾಡಿದ ಪ್ಯಾಕೇಜ್ ಹಣ ಜನರಿಗೆ ತಲುಪಿಲ್ಲ. ಹೀಗಾಗಿ ನಮಗೂ ಆ ಬಗ್ಗೆ ಆತಂಕವಿದ್ದು, ಸರ್ಕಾರದ ಯೋಜನೆಗಳು ಜನರಿಗೆ ತಲುಪುವ ಕೆಲಸವಾಗಬೇಕು ಎಂದರು.
ರಾಜ್ಯದಲ್ಲಿರುವ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಕೊರೆತೆ ಇದ್ದು, ಸಿಬ್ಬಂದಿ ನೇಮಕ ಮಾಡುವಂತೆ ಸಿಎಂ ಗಮನ ಸೆಳೆಯಲಾಗಿದೆ ಎಂದರು. ಇದೇ ವೇಳೆ ಪಿಯುಸಿ ಪರೀಕ್ಷೆ ರದ್ದು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಿಯುಸಿ ಪರೀಕ್ಷೆ ರದ್ದು ಮಾಡಿದಂತೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನೂ ರದ್ದು ಮಾಡಿದ್ರೆ ಒಳ್ಳೆಯದು ಎಂದು ತಿಳಿಸಿದರು.