ETV Bharat / state

ಜೈನಮುನಿ ಹತ್ಯೆ ಪ್ರಕರಣ: ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸುತ್ತಿದ್ದೇವೆ- ಬೆಳಗಾವಿ ಎಸ್ಪಿ - ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ್​ ಪಾಟೀಲ್

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಮೃತದೇಹದ ಅಂತ್ಯಸಂಸ್ಕಾರಕ್ಕೆ ಆಶ್ರಮದಲ್ಲಿ ಸಕಲಸಿದ್ಧತೆಗಳು ನಡೆಯುತ್ತಿವೆ. ಪ್ರಕರಣದ ತನಿಖೆಯ ಕುರಿತು ಎಸ್ಪಿ ಮಾತನಾಡಿದರು.

jain-monk-murder-dot-we-are-investigating-with-utmost-diligence-belagavi-sp
ಜೈನಮುನಿ ಹತ್ಯೆ ಪ್ರಕರಣ..ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸುತ್ತಿದ್ದೇವೆ : ಬೆಳಗಾವಿ ಎಸ್ಪಿ
author img

By

Published : Jul 9, 2023, 12:25 PM IST

Updated : Jul 9, 2023, 12:41 PM IST

ಜೈನಮುನಿ ಹತ್ಯೆ ಪ್ರಕರಣ: ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸುತ್ತಿದ್ದೇವೆ- ಬೆಳಗಾವಿ ಎಸ್ಪಿ

ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಭೀಕರ ಕೊಲೆ ಪ್ರಕರಣವನ್ನು ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ್​ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದಲ್ಲಿ ಶ್ರೀಗಳ ಮೃತದೇಹಗಳ ಅಂತಿಮ ಕಾರ್ಯಗಳ ಸಕಲ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳ ಪಾರ್ಥಿವ ಶರೀರವನ್ನು ಬೆಳಗಾವಿಯಲ್ಲಿ ಪರೀಕ್ಷೆ ನಡೆಸಿ ಹಿರೇಕೋಡಿ ಆಶ್ರಮಕ್ಕೆ ತರಲಾಗುವುದು ಎಂದು ತಿಳಿಸಿದರು.

ಜೀನಸೇನಾ ಭಟ್ಟಾರಕ ಮಹಾರಾಜರು ಬಂದ ಬಳಿಕ ಅಂತ್ಯಕ್ರಿಯೆ ನಡೆಯುವ ಸ್ಥಳ ನಿರ್ಣಯ ಮಾಡುತ್ತಾರೆ. ಜೈನ ಧರ್ಮದ ಹಿರಿಯರ ನಿರ್ದೇಶನದಂತೆ ಅಂತ್ಯಕ್ರಿಯೆ ನಡೆಯಲಿದೆ. ಆಶ್ರಮದ ಆವರಣದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಅಂತಿಮ ಕ್ರಿಯೆಯಲ್ಲಿ ಯಾವುದೇ ತೊಂದರೆ ಆಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮಠದ ಆವರಣದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕೊಲೆಯಲ್ಲಿ ಭಾಗಿಯಾಗಿರುವ ಇಬ್ಬರು ಆರೋಪಿತರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಹತ್ಯೆ ಮಾಡಿದ ಆರೋಪಿತರಾದ ನಾರಾಯಣ ಮಾಳಿ ಹಾಗೂ ಹಸನ್ ದಾಲಾಯತ್ ಎಂಬಿಬ್ಬರನ್ನು ವಿಚಾರಣೆ ನಡೆಸಲಾಗುತ್ತಿದೆ. ಈವರೆಗೆ ಹಲವು ಪ್ರಕರಣವನ್ನು ನಿರ್ಭೀತಿಯಿಂದ ತನಿಖೆ ಮಾಡಿಕೊಂಡು ಬಂದಿದ್ದೇವೆ. ಅದಕ್ಕಿಂತ ಹೆಚ್ಚಿನ ಮುತುವರ್ಜಿ ವಹಿಸಿ ಈ ಪ್ರಕರಣದ ತನಿಖೆ ನಡೆಸುತ್ತೇವೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹೇಳಿದರು.

ಇದನ್ನೂ ಓದಿ : ಜೈನ ಮುನಿಗಳಿಗೆ ರಕ್ಷಣೆ ಭರವಸೆ ಸರ್ಕಾರ ನೀಡುವರೆಗೂ ಸಲ್ಲೇಖನ ವೃತ ಕೈಗೊಳ್ಳುವೆ: ಕಣ್ಣೀರು ಹಾಕಿದ ಶ್ರೀ ಆಚಾರ್ಯ ಗುಣಧರನಂದಿ

ನಂದಿ ಪರ್ವತ ಆಶ್ರಮಕ್ಕೆ ಇಬ್ಬರು ಶ್ರೀಗಳ ಭೇಟಿ : ಚಿಕ್ಕೋಡಿ ಹಿರೇಕೋಡಿ ಜೈನ ಆಶ್ರಮಕ್ಕೆ ಕೊಲ್ಹಾಪುರ ಜಿಲ್ಲೆಯ ಶಿರೋಳ‌ ತಾಲೂಕಿನ ನಾಂದನಿ ಮಠದ ಜಿನಸೇನಾ ಭಟ್ಟಾರಕ ಶ್ರೀ, ವರುಣಾ ಮಠದ ಧರ್ಮಸೇನಾ ಭಟ್ಟಾರಕ ಶ್ರೀಗಳು ಭೇಟಿ ನೀಡಿದರು. ಶ್ರೀಗಳ ಅಂತಿಮ ಸಂಸ್ಕಾರ ಬಗ್ಗೆ ಮಠದ ಭಕ್ತರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಈಗಾಗಲೇ ಶ್ರೀಗಳ ಪಾರ್ಥಿವ ಶರೀರದ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಆಶ್ರಮದ ಭಕ್ತರು ಕೊಬ್ಬರಿ, ತುಪ್ಪ, ಚಂದನದ ಕಟ್ಟಿಗೆಗಳನ್ನು ಮಠಕ್ಕೆ ತಂದಿದ್ದಾರೆ. ಜೈನ ಧರ್ಮದ ವಿಧಿವಿಧಾನದಂತೆ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆ ಮಠದ ಆವರಣದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆಯಲಿದೆ ಎಂದು ಮಠದ ಮೂಲಗಳು ಮಾಹಿತಿ ನೀಡಿವೆ.

ಬಿಮ್ಸ್​ನಲ್ಲಿ ಮರಣೋತ್ತರ ಪರೀಕ್ಷೆ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಂದಿ ಮಹಾರಾಜರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಎಂಎಲ್‌ಸಿ ಪ್ರಕಾಶ ಹುಕ್ಕೇರಿ ಅವರು ಆಶ್ರಮದ ಟ್ರಸ್ಟಿಗಳು ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ಜೊತೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ : Jain monk murder: ನಾಪತ್ತೆಯಾಗಿದ್ದ ಚಿಕ್ಕೋಡಿಯ ಜೈನಮುನಿ ಹತ್ಯೆ.. ವೈಯಕ್ತಿಕ ಕಾರಣಕ್ಕೆ ಕೊಲೆ - ಎಸ್ಪಿ ಮಾಹಿತಿ

Last Updated : Jul 9, 2023, 12:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.