ETV Bharat / state

ಮಹಾರಾಷ್ಟ್ರ ಸಚಿವರೊಂದಿಗೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ರಮೇಶ್ ಜಾರಕಿಹೊಳಿ

ಅತಿವೃಷ್ಟಿ ಭೀತಿಯಲ್ಲಿರುವ ಮಹಾರಾಷ್ಟ್ರದ ಇಚಲಕರಂಜಿ ಬಳಿಯ ಪಂಚಗಂಗಾ ನದಿ ಸೇತುವೆ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ, ನೀರು ಬಿಡುಗಡೆ ಮಾಡುವ ಮುಂಚೆ ಬೆಳಗಾವಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಮಹಾರಾಷ್ಟ್ರ ಸಚಿವರಲ್ಲಿ ಮನವಿ ಮಾಡಿಕೊಂಡರು.

Jarakiholi reviewing the flood situation with the Maharashtra minister
ಮಹಾರಾಷ್ಟ್ರ ಸಚಿವರೊಂದಿಗೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ
author img

By

Published : Aug 8, 2020, 8:21 PM IST

ಚಿಕ್ಕೋಡಿ: ಪ್ರವಾಹ ಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು, ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ತುರ್ತು ಸಂದರ್ಭಗಳಲ್ಲಿ ನದಿ ತೀರದ ಗ್ರಾಮಗಳ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ಆರೋಗ್ಯ ಇಲಾಖೆಯ ಸಚಿವರಾದ ರಾಜೇಂದ್ರ ಪಾಟೀಲ್ ಎಡ್ರಾವಕರ್ ಅವರ ಜತೆ ಚರ್ಚೆ ನಡೆಸಿದರು.

Jarakiholi reviewing the flood situation with the Maharashtra minister
ಮಹಾರಾಷ್ಟ್ರ ಸಚಿವರೊಂದಿಗೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ

ಅತಿವೃಷ್ಟಿ ಭೀತಿಯಲ್ಲಿರುವ ಮಹಾರಾಷ್ಟ್ರದ ಇಚಲಕರಂಜಿ ಬಳಿಯ ಪಂಚಗಂಗಾ ನದಿ ಸೇತುವೆ ಪರಿಶೀಲಿಸಿದ ಸಚಿವರು, ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಗಳು ಭರ್ತಿಯಾದರೆ ನೀರು ಬಿಡುಗಡೆ ಮಾಡುವ ಮುಂಚೆ ಬೆಳಗಾವಿ ಜಿಲ್ಲಾಡಳಿತಕ್ಕೆ ಮಾಹಿತಿಯನ್ನು ನೀಡಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ, ಮಹಾರಾಷ್ಟ್ರ ಸಚಿವರಲ್ಲಿ ಮನವಿ ಮಾಡಿಕೊಂಡರು.

ಕಳೆದ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟ ಪರಿಣಾಮ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದರಲ್ಲದೇ ಬಹಳಷ್ಟು ಹಾನಿ ಉಂಟಾಗಿತ್ತು. ಆದ್ದರಿಂದ ಈ ಬಾರಿ ಕರ್ನಾಟಕ ಸರ್ಕಾರದ ವತಿಯಿಂದ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿರುತ್ತದೆ. ಮಳೆಯ ಪ್ರಮಾಣ, ಜಲಾಶಯಗಳ ಮಟ್ಟ ಮತ್ತು ನೀರು ಬಿಡುಗಡೆಗೆ ಕುರಿತು ಎರಡೂ ರಾಜ್ಯಗಳು ಪರಸ್ಪರ ಮಾಹಿತಿಯನ್ನು ವಿನಿಮಯ ಮಾಡಿಕೊಂಡು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಪ್ರವಾಹ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬಹುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.