ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಮುನಿಸು ಮುಂದುವರೆದಂತೆ ಕಾಣುತ್ತಿದೆ.
ಬೆಳಗಾವಿ ಜಿಲ್ಲೆಗೆ ಸಿಎಂ ಆಗಮಿಸಿದರೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಂತರ ಕಾಯ್ದುಕೊಂಡಿರುವುದು ಕುತೂಹಲ ಕೆರಳಿಸಿದೆ.
![Jarkiholi brothers distance maintained, Jarkiholi brothers distance maintained with CM Yediyurappa, CM Yediyurappa, CM Yediyurappa news, ಜಾರಕಿಹೊಳಿ ಸಹೋದರರು, ಬಿಎಸ್ವೈ ಜೊತೆ ಅಂತರ ಕಾಯ್ದುಕೊಂಡ ಜಾರಕಿಹೊಳಿ ಸಹೋದರರು, ಸಿಎಂ ಯಡಿಯೂರಪ್ಪ, ಸಿಎಂ ಯಡಿಯೂರಪ್ಪ ಸುದ್ದಿ,](https://etvbharatimages.akamaized.net/etvbharat/prod-images/kn-bgm-03-4-cm-jarkiholi-brothers-munisu-7201786_04062021125941_0406f_1622791781_968.jpg)
ಇಲ್ಲಿನ ಸುವರ್ಣಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಅಭಿವೃದ್ಧಿ ವಿಚಾರಗಳ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಬಿಜೆಪಿಯಲ್ಲಿರುವ ರಮೇಶ್ ಹಾಗೂ ಬಾಲಚಂದ್ರ ಜಾರಕಿಹೊಳಿ ಸಭೆಗೆ ಗೈರಾಗಿದ್ದಾರೆ. ಉಳಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ನ ಬಹುತೇಕ ಶಾಸಕರು ಸಭೆಯಲ್ಲಿದ್ದಾರೆ.
ಸಿಡಿ ಪ್ರಕರಣದ ನಂತರ ಜಾರಕಿಹೊಳಿ ಸಹೋದರರು ಸಿಎಂ ಯಡಿಯೂರಪ್ಪ ಜೊತೆಗೆ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಬೆಳಗಾವಿ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲೂ ಜಾರಕಿಹೊಳಿ ಬ್ರದರ್ಸ್ ಸಿಎಂ ಭೇಟಿಯಾಗಿರಲಿಲ್ಲ. ಸಿಎಂ ಯಡಿಯೂರಪ್ಪ ಹಾಗೂ ಜಾರಕಿಹೊಳಿ ಸಹೋದರರ ಮುನಿಸು ಮುಂದುವರೆದಿದೆ.