ETV Bharat / state

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜತೆ ಜಾರಕಿಹೊಳಿ ಸಹೋದರರಿಂದ ಪ್ರತ್ಯೇಕ ಸಭೆ - Jarkiholi brothers meeting with the state BJP general secretary

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್​​ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಎಲ್ಲ ಶಾಸಕರು, ಮುಖಂಡರು ಭಾಗಿಯಾಗಿದ್ದರು. ಆದರೆ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಮಾತ್ರ ಗೈರಾಗಿದ್ದರು..

Jarkiholi brothers meeting with the state BJP general secretary
ಅರುಣ್ ಕುಮಾರ್ ಭೇಟಿಗೆ ಆಗಮಿಸಿದ ರಮೇಶ್​​ ಜಾರಕಿಹೊಳಿ
author img

By

Published : Jul 19, 2021, 8:03 PM IST

ಬೆಳಗಾವಿ : ಗೋಕಾಕ್‍ನಲ್ಲಿಯೇ ಇದ್ದರೂ ಬಿಜೆಪಿ ಸಭೆಗೆ ಗೈರಾಗುವ ಮೂಲಕ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ಖಾಸಗಿ ಹೋಟೆಲ್​​ನಲ್ಲಿ ತಂಗಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಭೇಟಿಗೆ ಆಗಮಿಸಿದ್ದಾರೆ. ಜಾರಕಿಹೊಳಿ‌ ಸಹೋದರರು ಪ್ರತ್ಯೇಕ ಸಭೆ ನಡೆಸುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಅರುಣ್ ಕುಮಾರ್ ಭೇಟಿಗೆ ಆಗಮಿಸಿದ ರಮೇಶ್​​ ಜಾರಕಿಹೊಳಿ

ನಗರದ ಖಾಸಗಿ ಹೋಟೆಲ್​​ನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾತ್ಮಕ ಸಭೆಗೆ ಗೈರಾಗಿದ್ದ‌ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌, ಸಭೆ ನಂತರ ಎಲ್ಲ ನಾಯಕರು ತೆರಳಿದ ಬಳಿಕ ಅರುಣ್ ಕುಮಾರ್​ ಭೇಟಿಗೆ ಆಗಮಿಸಿದ್ದಾರೆ. ಈ ವೇಳೆ ಅರುಣ್ ಕುಮಾರ್ ಭೇಟಿಯಾಗಿ ಪ್ರತ್ಯೇಕ ಮಾತುಕತೆ ನಡೆಸುತ್ತಿದ್ದು, ರಮೇಶ್ ಜಾರಕಿಹೊಳಿ‌ಗೆ ಸಹೋದರರಾದ ಬಾಲಚಂದ್ರ, ಲಖನ್ ಜಾರಕಿಹೊಳಿ‌ ಸಾಥ್ ನೀಡಿದ್ದಾರೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್​​ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಎಲ್ಲ ಶಾಸಕರು, ಮುಖಂಡರು ಭಾಗಿಯಾಗಿದ್ದರು. ಆದರೆ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಮಾತ್ರ ಗೈರಾಗಿದ್ದರು.

ಇದನ್ನೂ ಓದಿ: ಸಾಮಾನ್ಯರದ್ದಲ್ಲ, ಈ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದೇ.. : ಡಿಕೆಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.