ETV Bharat / state

ಗಡಿನಾಡ ಜತ್ತ ಕನ್ನಡಿಗರ ಕುಡಿಯುವ ನೀರಿನ ಬವಣೆ: ಕರ್ನಾಟಕ ಸರ್ಕಾರದಿಂದ ನೆರವಿನ ನಿರೀಕ್ಷೆ - ಗಡಿ ಕನ್ನಡಿಗರು

ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಮಹಾರಾಷ್ಟ್ರದ ಜತ್ತ ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

Etv Bharatjatta-kannadigas-facing-drinking-water-problem-in-maharashtra
ಜತ್ತ ಕನ್ನಡಿಗರಿಗೆ ನೀರಿನ ಹಾಹಾಕಾರ: ನೀರಿಗಾಗಿ ರಾಜ್ಯ ಸರ್ಕಾರಕ್ಕೆ ಗಡಿ ಕನ್ನಡಿಗರ ಮನವಿ
author img

By ETV Bharat Karnataka Team

Published : Jan 14, 2024, 5:23 PM IST

Updated : Jan 14, 2024, 8:10 PM IST

ಗಡಿನಾಡ ಜತ್ತ ಕನ್ನಡಿಗರ ಕುಡಿಯುವ ನೀರಿನ ಬವಣೆ

ಚಿಕ್ಕೋಡಿ(ಬೆಳಗಾವಿ): ರಾಜ್ಯದ ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಜತ್ತ ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ನೀರಿಗೆ ಹಾಹಾಕಾರ ಉದ್ಭವಿಸಿದೆ. ಜತ್ತ ತಾಲೂಕಿನ ಬಸರಗಿ, ಉಮರಾಣಿ, ಸಿಂಧೂರ, ಗೂಗವಾಡ ಗ್ರಾಮಗಳಲ್ಲಿ ಹೆಚ್ಚಾಗಿ ಕನ್ನಡಿಗರೇ ನೆಲೆಸಿದ್ದಾರೆ. ಬರಗಾಲದ ಹಿನ್ನೆಲೆಯಲ್ಲಿ ಇಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನೊಂದಿಗೆ ದಿನ ಬಳಕೆ ನೀರೂ ಸಿಗುತ್ತಿಲ್ಲ. ಹೀಗಾಗಿ ಇಲ್ಲಿನ ಕನ್ನಡಿಗರು ನೀರಿಗಾಗಿ ಪರಿತಪಿಸುತ್ತಿದ್ದಾರೆ.

ಕಳೆದ ಆಗಸ್ಟ್‌ನಿಂದ ಮಹಾರಾಷ್ಟ್ರ ಸರ್ಕಾರ ಇಲ್ಲಿರುವ ಜನರಿಗೆ ಟ್ಯಾಂಕರ್ ಮುಖಾಂತರ ನೀರು ಸರಬರಾಜು ಮಾಡುತ್ತಿದೆ. ಆದರೆ ವಾರಕ್ಕೊಮ್ಮೆ ಮಾತ್ರ ಟ್ಯಾಂಕರ್ ನೀರು ಬರುತ್ತಿದ್ದು ಕುಡಿಯಲು ಮತ್ತು ದಿನ ಬಳಕೆಗೆ ಇದು ಸಾಲುತ್ತಿಲ್ಲ ಎಂದು ಜನರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಗಡಿ ಕನ್ನಡಿಗರ ಮೇಲೆ ಮಲತಾಯಿ ಧೋರಣೆ ತೋರುತ್ತಿದ್ದು, ಕರ್ನಾಟಕ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕು ಮನವಿ ಮಾಡುತ್ತಿದ್ದಾರೆ.

'ನಮ್ಮನ್ನು ಕರ್ನಾಟಕಕ್ಕೆ ಬರಮಾಡಿಕೊಳ್ಳಲಿ': ಬಸರಗಿ ಗ್ರಾಮದ ಸ್ಥಳೀಯರಾದ ಅಪ್ಪಾಸಾಬ ಮುಲ್ಲಾ ಮಾತನಾಡಿ, "ನಾವು ಮೂಲತಃ ಕನ್ನಡಿಗರೇ. ಆದರೆ ಭಾಷಾವಾರು ಪ್ರಾಂತ್ಯದ ವಿಭಜನೆ ಸಂದರ್ಭದಲ್ಲಿ ನಮಗೆ ಅನ್ಯಾಯವಾಗಿ ನಾವು ಇಲ್ಲೇ ಉಳಿದಿದ್ದೇವೆ. ಮಹಾರಾಷ್ಟ್ರ ಸರ್ಕಾರ ನಮಗೆ ಮೂಲಭೂತ ಸೌಕರ್ಯವನ್ನೂ ನೀಡುತ್ತಿಲ್ಲ. ಇಲ್ಲಿ ಕೆರೆ-ಕಟ್ಟೆಗಳು ತುಂಬುತ್ತಿಲ್ಲ. ಇದರಿಂದ ನೀರಾವರಿಗೆ ನಮಗೆ ತುಂಬಾ ತೊಂದರೆಯಾಗಿದೆ. ಕುಡಿಯುವ ನೀರಿಗೂ ಜನ-ಜಾನುವಾರುಗಳು ಪರಿತಪಿಸುವಂತಾಗಿದೆ. ಎಂಟು ದಿನಕ್ಕೆ ಒಮ್ಮೆ ಮಹಾರಾಷ್ಟ್ರ ಸರ್ಕಾರ ನಮಗೆ ನೀರು ಸರಬರಾಜು ಮಾಡುತ್ತಿದ್ದು, ಇದು ಯಾವುದಕ್ಕೂ ಸಾಲುತ್ತಿಲ್ಲ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮನ್ನು ಕರ್ನಾಟಕಕ್ಕೆ ಬರಮಾಡಿಕೊಳ್ಳಲಿ ಅಥವಾ ಪಕ್ಕದ ಹಳ್ಳಿಗಳಿಂದ ನಮಗೆ ನೀರನ್ನು ಹರಿಸಲಿ" ಎಂದು ಅಳಲು ತೋಡಿಕೊಂಡರು.

ಕನ್ನಡ ಪರ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ್ ಚಂದರಗಿ 'ಈಟಿವಿ ಭಾರತ್'​ ಜೊತೆಗೆ ದೂರವಾಣಿಯಲ್ಲಿ ಮಾತನಾಡುತ್ತಾ, "ಗಡಿನಾಡು ಕನ್ನಡಿಗರಿಗೆ ಎಲ್ಲಾ ಸರ್ಕಾರಗಳು ಅನ್ಯಾಯ ಮಾಡಿಕೊಂಡು ಬಂದಿವೆ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಅವಧಿಯಲ್ಲಿ ಜತ್ತ ಕನ್ನಡಿಗರ ಸಮಸ್ಯೆಗಳ ಕುರಿತು ಬೆಳಗಾವಿಯಲ್ಲಿ ಚರ್ಚೆ ನಡೆಸಲಾಗಿತ್ತು. ಬೆಂಗಳೂರಿನಲ್ಲೂ ಕೂಡ ಮುಖ್ಯಮಂತ್ರಿಗಳು ಒಂದು ಸಭೆ ನಡೆಸಿದ್ದರು. ಸಿಎಂ ಸಿದ್ದರಾಮಯ್ಯರಿಗೆ ನಾವು ಮತ್ತೊಮ್ಮೆ ಮನವಿ ಸಲ್ಲಿಸಿದ್ದೇವೆ. ಕಳೆದ ನಾಲ್ಕು ತಿಂಗಳಿನಿಂದ ಸಭೆ ಮಾಡುವಂತೆ ಕೇಳಿದರೂ ಇದುವರೆಗೂ ಮಾಡಿಲ್ಲ. ಗಡಿ ಪ್ರದೇಶ ಪ್ರಾಧಿಕಾರ ಅಧ್ಯಕ್ಷರು ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದಾರೆ. ಗಡಿಭಾಗದ ಕನ್ನಡಿಗರು ನೀರಿಲ್ಲದೆ ಸಂಕಷ್ಟಪಡುವಂತಾಗಿದೆ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಅವರಿಗೆ ನೀರು ಕೊಡುವ ವ್ಯವಸ್ಥೆ ಮಾಡಬೇಕು" ಎಂದು ಆಗ್ರಹಿಸಿದರು.

ತಹಶೀಲ್ದಾರ್ ಹೇಳಿದ್ದೇನು?: ಜತ್ತ ತಹಶೀಲ್ದಾರ್ ಜೀವನ ಬನಸೋಡೆ 'ಈಟಿವಿ ಭಾರತ್'​ ಜೊತೆಗೆ ದೂರವಾಣಿ ಮುಖಾಂತರ ಮಾತನಾಡಿ, "ಬರಗಾಲವಿರುವ ಹಿನ್ನೆಲೆಯಲ್ಲಿ ನಾವು ಟ್ಯಾಂಕರ್ ಮುಖಾಂತರ ನೀರು ಸರಬರಾಜು ಮಾಡುತ್ತಿದ್ದೇವೆ. ಪ್ರತಿದಿನವೂ ಟ್ಯಾಂಕರ್ ಮುಖಾಂತರ ನೀರು ಸರಬರಾಜು ಮಾಡಲಾಗುತ್ತಿದೆ. ಪ್ರತಿ ಎಂಟು ದಿನಕ್ಕೊಮ್ಮೆ ನೀರು ಸರಬರಾಜಾಗುತ್ತಿರುವುದು ನನ್ನ ಗಮನಕ್ಕೆ ಬಂದಿಲ್ಲ. ಆ ರೀತಿ ಏನಾದರೂ ಸಮಸ್ಯೆಗಳಿದ್ದಲ್ಲಿ ಅಲ್ಲಿನ ಸ್ಥಳೀಯರು ಗ್ರಾಮ ಪಂಚಾಯಿತಿ ಮುಖಾಂತರ ಮನವಿ ಸಲ್ಲಿಸಬೇಕು. ಗ್ರಾಮ ಅಭಿವೃದ್ಧಿ ಅಧಿಕಾರಿಗಳು ನಮಗೆ ಮನವಿ ಸಲ್ಲಿಸುತ್ತಾರೆ. ನಂತರ ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು" ಎಂದು ಹೇಳಿದರು.

ಇದನ್ನೂ ಓದಿ: ಜತ್ತ ತಾಲೂಕಿನ ಕನ್ನಡಿಗರ ದುಃಸ್ಥಿತಿ ಹೇಳತೀರದು; ಮಹಾರಾಷ್ಟ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ

Last Updated : Jan 14, 2024, 8:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.