ಅಥಣಿ: ಪಂಚಮಸಾಲಿ ಸಮಾಜವನ್ನು ರಾಜ್ಯ ಸರ್ಕಾರವು 2ಎಗೆ ಹಾಗೂ ಕೇಂದ್ರ ಸರ್ಕಾರ ಒಬಿಸಿಗೆ ಸೇರಿಸಬೇಕೆಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು ಒತ್ತಾಯಿಸಿದ್ದಾರೆ.
ತಾಲೂಕಿನಲ್ಲಿ ಮಾಧ್ಯಮದೊಂದಿಗೆ ಮಾಹಿತಿ ನೀಡಿದ ಅವರು, ಕರ್ನಾಟದಲ್ಲಿ ಅತಿ ಹೆಚ್ಚು ಪಂಚಮಸಾಲಿ ಸಮಾಜದವರು ವಾಸವಾಗಿದ್ದಾರೆ. ಹೀಗಾಗಿ, ಇವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅವಶ್ಯಕತೆಯಿದೆ. ಹಾಗಾಗಿ ಮೀಸಲಾತಿಗಾಗಿ ಒತ್ತಾಯಿಸಿ ಇದೇ 28ರಂದು ಬೆಳಗಾವಿ ಸುವರ್ಣ ವಿಧಾನಸೌಧ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದರು.