ETV Bharat / state

ಸಾರಿಗೆ ನೌಕರರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು : ಜಯ ಮೃತ್ಯುಂಜಯ ಸ್ವಾಮೀಜಿ

ಕಳೆದ ಮೂರು ತಿಂಗಳಿನ ಹಿಂದೆ ಸಾರಿಗೆ ನೌಕರರಿಗೆ 6ನೇ ವೇತನ ಜಾರಿ ಮಾಡುವ ಭರವಸೆ ನೀಡಲಾಗಿತ್ತು. ಇದೀಗ ಸರ್ಕಾರ ಎಲ್ಲೋ ಒಂದು ಕಡೆ ಹಿಂದೇಟು ಹಾಕುತ್ತಿದೆ. ಸರ್ಕಾರ ಅವರ ಬೇಡಿಕೆಗೆ ಕೂಡಲೇ ದಿಟ್ಟ ಹೆಜ್ಜೆ ಇಡಬೇಕು. ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರ ಅವಧಿಯಲ್ಲಿ ಆಗುವಂತಹ ಕೆಲಸಕ್ಕೆ ಸರ್ಕಾರ ಅನುಮತಿ ನೀಡಬೇಕು..

jayamruthyunjaya-swamiji-insist-to-6th-pay-commission
ಜಯ ಮೃತ್ಯುಂಜಯ ಸ್ವಾಮೀಜಿ
author img

By

Published : Apr 7, 2021, 7:49 PM IST

ಅಥಣಿ : ಸಾರಿಗೆ ನೌಕರರನ್ನು ರಾಜ್ಯ ನೌಕರರನ್ನಾಗಿ ಘೋಷಿಸುವಂತೆ ಕೂಡಲಸಂಗಮ ಪಂಚಮಸಾಲಿ ಪೀಠ ಸರ್ಕಾರಕ್ಕೆ ಮೊದಲೇ ಒತ್ತಾಯ ಮಾಡಿತ್ತು. ಈಗಲಾದರೂ ಸರ್ಕಾರ ನೌಕರರ ಬೇಡಿಕೆಯನ್ನು ತ್ವರಿತಗತಿಯಲ್ಲಿ ಈಡೇರಿಸಬೇಕೆಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಸಹಕರಿಸಿದ ಪಂಚಮಸಾಲಿ ಬಂಧು-ಬಾಂಧವರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀಗಳು ಮಾತನಾಡಿ, ಕಳೆದ ಮೂರು ತಿಂಗಳಿನ ಹಿಂದೆ ಸಾರಿಗೆ ನೌಕರರಿಗೆ 6ನೇ ವೇತನ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು.

ಸಾರಿಗೆ ನೌಕರರಿಗೆ 6ನೇ ವೇತನ ಜಾರಿಗೊಳಿಸಲು ಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹ..

ಇದೀಗ ಸರ್ಕಾರ ಎಲ್ಲೋ ಒಂದು ಕಡೆ ಹಿಂದೇಟು ಹಾಕುತ್ತಿದೆ. ಸರ್ಕಾರ ಅವರ ಬೇಡಿಕೆಗೆ ಕೂಡಲೇ ದಿಟ್ಟ ಹೆಜ್ಜೆ ಇಡಬೇಕು. ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರ ಅವಧಿಯಲ್ಲಿ ಆಗುವಂತಹ ಕೆಲಸಕ್ಕೆ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿದರು.

ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟಾಗಿದೆ. ಸರ್ಕಾರ ಜನಸಾಮಾನ್ಯರ ಹಿತದೃಷ್ಟಿಯಿಂದ ಸಾರಿಗೆ ನೌಕರರಿಗೆ 6ನೇ ವೇತನ ನೀಡಬೇಕು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಆರು ತಿಂಗಳಲ್ಲಿ ನೀಡಲಾಗುವುದೆಂದು ಮುಖ್ಯಮಂತ್ರಿ ಸದನದಲ್ಲಿ ಮಾತು ನೀಡಿದ್ದಾರೆ.

ಒಂದು ವೇಳೆ ಮಾತು ತಪ್ಪಿದ್ರೆ ಬೆಂಗಳೂರಿನಲ್ಲಿ ಇಪ್ಪತ್ತು ಲಕ್ಷ ಪಂಚಮಸಾಲಿ ಸಮಾಜದ ಜನರೊಂದಿಗೆ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಸಿದರು.

ಓದಿ: ಪರೀಕ್ಷಾ ಪೇ ಚರ್ಚಾ: ಮೋದಿ ಜೊತೆಗಿನ ಸಂವಾದದಲ್ಲಿ ವಿದ್ಯಾರ್ಥಿ, ಪಾಲಕರು ಭಾಗಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.