ಅಥಣಿ: ರಸಗೊಬ್ಬರ, ಬಿತ್ತನೆ ಬೀಜವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಸ್.ಎಸ್.ಪಾಟೀಲ್ ಹೇಳಿದರು.
ಅಥಣಿ ತಾಲೂಕಿಗೆ ಭೇಟಿ ನೀಡಿ ವ್ಯಾಪಾರಸ್ಥರ ಸಭೆ ನಡೆಸಿ ಮಾತನಾಡಿದ ಅವರು, ತಾಲೂಕಿನ ಅನೇಕ ರೈತರು ಮತ್ತು ಸಂಘಟನೆಗಳ ಸದಸ್ಯರು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಪ್ರತಿಯೊಬ್ಬರು ಕೀಟನಾಶಕ ಮತ್ತು ರಸಗೊಬ್ಬರದ ದರದ ಬಗ್ಗೆ ಅಂಗಡಿ ಮುಂದೆ ಬೋರ್ಡ್ ಹಾಕಿರಬೇಕು ಎಂದು ಹೇಳಿದರು.
ಈಗಾಗಲೇ ಕೊರೊನಾದಿಂದ ರೈತರು ಕಂಗಾಲಾಗಿದ್ದಾರೆ. ಅವರಿಂದ ಹೆಚ್ಚಿನ ಬೆಲೆ ಪಡೆಯುವ ಬಗ್ಗೆ ಇನ್ನುಮುಂದೆ ದೂರು ಬಂದರೆ ತಕ್ಷಣ ಅವರ ಮಾರಾಟ ಪರವಾನಗಿ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದರು.