ಅಥಣಿ: ಕೊರೊನಾ ಸಂಕಷ್ಟದ ಸಮಯದಲ್ಲಿ ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ಮತ್ತು ಅವರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಪತ್ರಕರ್ತರು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಕೊರೊನಾ ವಾರಿಯರ್ಸ್ ಎಂದು ಗುರುತಿಸುವಂತೆ ಪತ್ರಕರ್ತ ದೀಪಕ ಶಿಂಧೆ ಆಗ್ರಹಿಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ಪೊಲೀಸರು, ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು ಮತ್ತು ತಾಲೂಕು ಪಂಚಾಯಿತಿ ಹಾಗೂ ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ಕಾರ್ಯ ಶ್ಲಾಘನೀಯ ಅದರಲ್ಲೂ ಬಹಳ ಜನರಿಗೆ ಜೀವವಿಮೆ ಇಲ್ಲದಂತಾಗಿದ್ದು ವಿಪರ್ಯಾಸದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ ದೀಪಕ ಶಿಂಧೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪತ್ರಕರ್ತರಿಗೂ ಜೀವನ ಭದ್ರತೆ ಒದಗಿಸಿ ಜೀವವಿಮಾ ವ್ಯಾಪ್ತಿಗೆ ಒಳಪಡಿಸಿ ಸಹಕರಿಸಬೇಕಾದ ತುರ್ತು ಅಗತ್ಯ ಇದೆ ಎಂದು ಹೇಳಿದ್ದಾರೆ.