ಚಿಕ್ಕೋಡಿ: ಕಾಂಗ್ರೆಸ್ ಪಕ್ಷದಿಂದ ಕಾಗವಾಡ ಕ್ಷೇತ್ರದ ಉಪಚುನಾವಣೆಗೆ ಐದು ಅಭ್ಯರ್ಥಿಗಳು ಹಾಗೂ ಅಥಣಿ ಕ್ಷೇತ್ರದ ಉಪಚುನಾವಣೆಗೆ ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕಾಗವಾಡ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಕಾಗವಾಡ ಮತಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಟ್ಟು ಐದು ಜನರು ನಾಮಪತ್ರ ಸಲ್ಲಿಸಿದ್ದಾರೆ. ಚಂದ್ರಕಾಂತ ಬಸಪ್ಪ ಇಮ್ಮಡಿ, ರವೀಂದ್ರ ಗಾಣಿಗೇರ, ಬಾಬಾಸಾಬ್ ಸಿಂಧೆ, ದಿಗ್ವಿಜಯ ಪವಾರದೇಸಾಯಿ ಮತ್ತು ಓಂ ಪ್ರಕಾಶರಾವ್ ಪಾಟೀಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಅಥಣಿ ಕ್ಷೆತ್ರದ ಅನರ್ಹ ಶಾಸಕ ಮಹೇಶ್ ಕುಮಠಳ್ಳಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಶಾಸಕ ಶಹಜಹಾನ್ ಡೋಂಗರ್ ಗಾಂವ್, ಸತ್ಯಪ್ಪ ಭಾಗೆನ್ನವರ ಮತ್ತು ಸಿದ್ದರಾಮಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.