ಬೆಳಗಾವಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆ ಹೋರಾಟಗಾರರ ಪ್ರತಿಭಟನೆ ನಡೆಸುತ್ತಿದ್ದಾರೆ.
ಹುತಾತ್ಮ ದಿನದ ಹೆಸರಿನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕನ್ನಡಿಗರನ್ನು ಕೆರಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಅಲ್ಲಿನ ಮುಖ್ಯಮಂತ್ರಿ ಇಲ್ಲಿನ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಟ್ವಿಟರ್ನಲ್ಲಿ ಹೇಳಿಕೆ ನೀಡಿದ್ದಾರೆ. ಆದ್ರೆ, ಉದ್ಧವ ಠಾಕ್ರೆ ತಿರುಕನ ಕನಸು ಕಾಣುತ್ತಿದ್ದಾರೆ. ಅವ್ರ ಕನಸು ಸುಳ್ಳಾಗುತ್ತದೆ ಎಂದಿದ್ದಾರೆ.
ಕನ್ನಡಿಗರು ಕೈಕಟ್ಟಿ ಕುಳಿತಿಲ್ಲ. ಆದ್ರೆ, ಮಹಾರಾಷ್ಟ್ರ ಸಿಎಂ ಈ ತರಹದ ಹೇಳಿಕೆ ನೀಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ, ಯಾವೊಬ್ಬ ನಾಯಕರು ಸೂಕ್ತ ಕ್ರಮ ಜರುಗಿಸುತ್ತಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಅವರು ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಬೇಕು. ಗಡಿ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ. ಇಂತಹ ಸಂದರ್ಭಗಳಲ್ಲೂ ಮಹಾರಾಷ್ಟ್ರ ಮುಖ್ಯಮಂತ್ರಿ ಇಂತಹ ಹೇಳಿಕೆ ಕೊಟ್ಟು ಕರ್ನಾಟಕದ ಕಾನೂನು ಸುವ್ಯವಸ್ಥೆ ಕಡೆಸಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅವರ ಮೇಲೆ ಸೂಕ್ತ ಕ್ರಮ ಜರುಗಿಸಲು ಮನವಿ ಮಾಡಿಕೊಳ್ಳಬೇಕು. ನಾಡದ್ರೋಹಿ ಕೆಲಸ ಮಾಡುತ್ತಿರುಯವ ನಮ್ಮ ರಾಜ್ಯದಲ್ಲಿಯೇ ಇರುವ ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹಾಗೂ ಗಡಿ ವಿಚಾರದಲ್ಲಿ ಬೇಜವಾಬ್ದಾರಿ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬೆಳಗ್ಗೆ 11ಗಂಟೆಗೆ ಬೃಹತ್ ವಿವಿಧ ಕನ್ನಡಪರ ಸಂಘಟ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಟ್ವಿಟರ್ ನಲ್ಲಿ ಏನಿದೆ: ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡ್ತೇವೆ. ಕರ್ನಾಟಕ ಆಕ್ರಮಿತ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡ್ತೇವೆ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಟ್ವೀಟ್ ಮಾಡಿದ್ದರು.