ಬೆಳಗಾವಿ: ರಾಜ್ಯ ಸರ್ಕಾರದ ಕಾರ್ಯಕ್ರಮವನ್ನು ಮರಾಠಿಮಯ ಮಾಡಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಬೆಳಗಾವಿ ಡಿಸಿಗೆ ಎಚ್ಚರಿಕೆ ಪತ್ರ ಬರೆದಿದ್ದಾರೆ.
ನಾಲ್ಕು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ರಾಜಹಂಸಗಡದಲ್ಲಿ ಶಿವಾಜಿ ಪುತ್ಥಳಿ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಂಪೂರ್ಣ ಮರಾಠಿಮಯಗೊಳಿಸಲಾಗಿತ್ತು. ಸರ್ಕಾರಿ ಕಾರ್ಯಕ್ರಮವಿದ್ದರೂ ಮುಖ್ಯ ವೇದಿಕೆಯ ಬ್ಯಾನರ್‌ನಲ್ಲಿ ಕನ್ನಡ ಪದ ಬಳಸಿರಲಿಲ್ಲ.
ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯನ್ನ ನಿರ್ಲಕ್ಷ್ಯ ಮಾಡಿ, ಮರಾಠಿ ಭಾಷೆಗೆ ಒತ್ತು ನೀಡಿದ್ದಕ್ಕೆ ಪ್ರಾಧಿಕಾರದ ಅಧ್ಯಕ್ಷ ಎಸ್.ಟಿ.ನಾಗಾಭರಣ ಕೆಂಡಾಮಂಡಲರಾಗಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಧಿಕಾರ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ.
ಮರಾಠಿಗರ ಮತ ಸೆಳೆಯಲು ರಾಜಕಾರಣಿಗಳ ಪೈಪೋಟಿ: ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿದ್ದೇನು?