ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಧ್ಯರಾತ್ರಿಯೇ ರಾಜ್ಯೋತ್ಸವಕ್ಕೆ ಅದ್ಧೂರಿಯಾಗಿ ಕನ್ನಡಾಭಿಮಾನಿಗಳು ಚಾಲನೆ ನೀಡಿದ್ದಾರೆ. ಈ ವೇಳೆ ಪುನೀತ್ ಭಾವಚಿತ್ರ ಇರುವ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಚೆನ್ನಮ್ಮ ವೃತ್ತದಲ್ಲಿ ಸೇರಿದ ಯುವಕರು ಕನ್ನಡದ ಬಾವುಟ ಹಿಡಿದು ಕುಣಿದು ಕುಪ್ಪಳಿಸಿದರು. 12 ಗಂಟೆ ಆಗುತ್ತಿದ್ದಂತೆ ಕನ್ನಡಾಭಿಮಾನಿಗಳ ಖುಷಿ ಇಮ್ಮಡಿಯಾಗಿತ್ತು. ಕನ್ನಡ ಪರ, ಅಪ್ಪು ಪರವಾಗಿ ಜಯಘೋಷಗಳನ್ನು ಕೂಗಿದರು.
ಇದನ್ನೂ ಓದಿ: ನಿಮ್ಮಲ್ಲಿ ಸ್ಮಾರ್ಟ್ ಫೋನ್ ಇದ್ದರೆ, ನಾಳೆಯಿಂದ ಮೆಟ್ರೋ ಪ್ರಯಾಣ ಇನ್ನೂ ಸುಲಭ