ETV Bharat / state

ಬೆಳಗಾವಿ ಗಲಾಟೆಗೆ ಶಾಸಕ ಶ್ರೀಮಂತ ಪಾಟೀಲ ಹೊಣೆಗಾರ : ಕರವೇ ಮುಖಂಡ ಬಸವರಾಜ ಆಕ್ರೋಶ - ಕರವೇ ಮುಖಂಡ ಬಸವರಾಜ

ಅಥಣಿ ಪಟ್ಟಣದಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆಯನ್ನು ಖಂಡಿಸಿದ್ದು, ಅವರನ್ನು ಬಂಧಿಸುವಂತೆ ಕರವೇ ಅಥಣಿ ತಾಲೂಕು ಅಧ್ಯಕ್ಷ ಬಸವರಾಜ ಪಾಟೀಲ್ ಆಗ್ರಹಿಸಿದ್ದಾರೆ..

Karave leaders protest against MES in Athani
ಕರವೇ ಮುಖಂಡ ಬಸವರಾಜ
author img

By

Published : Dec 19, 2021, 5:15 PM IST

ಅಥಣಿ: ಕನ್ನಡಪರ ಹೋರಾಟಗಾರರು ಮತ್ತು ಎಂಇಎಸ್ ನಡುವೆ ಗೊಂದಲಕ್ಕೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಕಾರಣ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಕರವೇ ಅಥಣಿ ತಾಲೂಕು ಅಧ್ಯಕ್ಷ ಬಸವರಾಜ ಪಾಟೀಲ್ ಆಗ್ರಹಿಸಿದ್ದಾರೆ.

ಅಥಣಿ ಪಟ್ಟಣದಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆಯನ್ನು ಖಂಡಿಸಿ ಜತ್ತ- ಜಾಂಬೋಟಿ ರಸ್ತೆ ತಡೆ ಹಿಡಿದು ಪ್ರತಿಭಟನೆ ನಡೆಸಿ ಎಂಇಎಸ್ ಕಾರ್ಯಕರ್ತರನ್ನು ಬಂಧಿಸುವಂತೆ ಹಾಗೂ ಕನ್ನಡಪರ ಹೋರಾಟಗಾರರ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.

ಶಾಸಕ ಶ್ರೀಮಂತ ಪಾಟೀಲ ವಿರುದ್ಧ ಕರವೇ ಮುಖಂಡ ಬಸವರಾಜ ಆಕ್ರೋಶ ವ್ಯಕ್ತಪಡಿಸಿರುವುದು..

ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಬಸವರಾಜ ಪಾಟೀಲ್ ಮಾಧ್ಯಮಗಳ ಜೊತೆ ಮಾತನಾಡಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜೊತೆ ಸಭೆ ನಡೆಸಿದರು.

ಸಚಿವ ಸ್ಥಾನ ಸಿಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆ ರಾತ್ರಿ ಹೊತ್ತಿನಲ್ಲಿ ಬೆಳಗಾವಿ ನಗರದಲ್ಲಿ ಗಲಾಟೆ ನಡೆಸಲಾಗಿದೆ ಎಂದು ಕಾಗವಾಡ ಶಾಸಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.