ETV Bharat / state

ಮಹಾ ಸರ್ಕಾರದಿಂದ ಗಡಿಗೆ ಸಂಬಂಧಿಸಿದ ವಿವಾದಿತ ಪುಸ್ತಕ ಬಿಡುಗಡೆ ವಿರುದ್ಧ ಕರವೇ ಕಿಡಿ

ಕರವೇ ಗೋಕಾಕ್ ತಾಲೂಕು ಅಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಹಾರಾಷ್ಟ್ರ ಸರ್ಕಾರ ಹಾಗೂ ಉದ್ಧವ್ ಠಾಕ್ರೆ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ..

author img

By

Published : Jan 27, 2021, 2:41 PM IST

karave protest against maharastra's border controversial book
ಮುಖಪುಟ ದಹಿಸಿ ಕರವೇ ಪ್ರತಿಭಟನೆ

ಬೆಳಗಾವಿ : ಗಡಿಯ ಕುರಿತಾದ ವಿವಾದಿತ ಪುಸ್ತಕ ಬಿಡುಗಡೆಗೆ ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಖಂಡಿಸಿ ಬೆಳಗಾವಿ ಜಿಲ್ಲೆಯ ಗೋಕಾಕ್​ ನಗರದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದರು.

ಮಹಾ ಸಿಎಂ ಠಾಕ್ರೆ ಉದ್ಧಟತನದ ವಿರುದ್ಧ ಕರವೇ ಕಿಡಿ..

ಡಾ.ದೀಪಕ್ ಕಮಲ್ ತಾನಾಜಿ ಪವಾರ್ ಸಂಪಾದಕತ್ವದಲ್ಲಿ "ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ ಸಂಘರ್ಷ ಅನಿ ಸಂಕಲ್ಪ" ವಿವಾದಿತ ಪುಸ್ತಕವನ್ನು ಮಹಾರಾಷ್ಟ್ರ ಸರ್ಕಾರ ಸಿದ್ಧಪಡಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ವಿವಾದಿತ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಬಿಡುಗಡೆಯ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದೆ.

ಕರವೇ ಗೋಕಾಕ್ ತಾಲೂಕು ಅಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಹಾರಾಷ್ಟ್ರ ಸರ್ಕಾರ ಹಾಗೂ ಉದ್ಧವ್ ಠಾಕ್ರೆ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ವಿವಾದಿತ ಪುಸ್ತಕದ ಮುಖಪುಟದ ಭಾವಚಿತ್ರ ದಹಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಪಶ್ಚಿಮ ಬಂಗಾಳ: ಸಮಾನ ವೇತನಕ್ಕೆ ಆಗ್ರಹಿಸಿ ಅಸೆಂಬ್ಲಿ ಎದುರು ಅರೆಕಾಲಿಕ ಶಿಕ್ಷಕರ ಪ್ರತಿಭಟನೆ - VIDEO

ETV Bharat Logo

Copyright © 2024 Ushodaya Enterprises Pvt. Ltd., All Rights Reserved.