ETV Bharat / state

ಬೆಳಗಾವಿ ಕನ್ನಡ ರಾಜ್ಯೋತ್ಸವ ಆಚರಣೆಗೆ 2 ಕೋಟಿ ರೂ. ಅನುದಾನ ನೀಡಬೇಕೆಂದು ಕರವೇ ಆಗ್ರಹ - ಕರಾಳ ದಿನ ಆಚರಣೆ

ಕರಾಳ ದಿನ ಆಚರಣೆಗೆ ನಾಡದ್ರೋಹಿಗಳಿಗೆ ಅನುಮತಿ ನೀಡಬಾರದೆಂದು ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.

Karave activists Protest
ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ
author img

By ETV Bharat Karnataka Team

Published : Oct 7, 2023, 4:54 PM IST

ಬೆಳಗಾವಿ: ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ಧೂರಿಯಿಂದ ಆಚರಿಸಲು 2 ಕೋಟಿ ರೂಪಾಯಿ ಅನುದಾನ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್​ ಪ್ರತಿಭಟನಾ ಮೆರವರಣಿಗೆ ನಡೆಸಿದರು.

ತಾಯಿ ಭುವನೇಶ್ವರಿ ತೇರು ಎಳೆಯುವ ಮೂರು ಲಕ್ಷ ಕನ್ನಡಿಗರು : ಬೆಳಗಾವಿಯಲ್ಲಿ ಗಡಿಭಾಗದ ಕನ್ನಡಿಗರೆಲ್ಲ ಸೇರಿಕೊಂಡು ಅದ್ಧೂರಿಯಿಂದ ಆಚರಿಸುವ ಕನ್ನಡ ರಾಜ್ಯೋತ್ಸವ ಇಡೀ ರಾಜ್ಯದಲ್ಲಿ ಅತ್ಯಂತ ಅಭೂತಪೂರ್ವ. ಈ ವೇಳೆ ಮೂರು ಲಕ್ಷಕ್ಕೂ ಹೆಚ್ಚು ಕನ್ನಡಿಗರು ಸೇರಿ ತಾಯಿ ಭುವನೇಶ್ವರಿ ದೇವಿ ತೇರು ಎಳೆಯುತ್ತಾರೆ. ಹಾಗಾಗಿ ಜಿಲ್ಲಾಡಳಿತಕ್ಕೆ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಕೈಗೊಳ್ಳಲು 2 ಕೋಟಿ ರೂ. ಅನುದಾನವನ್ನು ಅಕ್ಟೋಬರ್ ಮೊದಲ ವಾರದಲ್ಲೇ ಬಿಡುಗಡೆಗೊಳಿಸಬೇಕು.

ಕರಾಳ ದಿನ ಆಚರಣೆಗೆ ಅನುಮತಿ ನೀಡಬಾರದು: ಅಲ್ಲದೇ ನಾಡದ್ರೋಹಿಗಳಿಗೆ ಕರಾಳ ದಿನ ಆಚರಣೆಗೆ ಯಾವುದೇ ರೀತಿ ಅನುಮತಿ ನೀಡಬಾರದು. ರಾಜ್ಯೋತ್ಸವ ದಿನ ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಸರ್ಕಾರದ ವತಿಯಿಂದ ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಬೇಕು. ಕಾರ್ಯಕ್ರಮಕ್ಕೆ ಚಿತ್ರರಂಗದ ದಿಗ್ಗಜರನ್ನು ಆಹ್ವಾನಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿ ಅವರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಕರವೇ ಜಿಲ್ಲಾಧ್ಯಕ್ಷ ದೀಪಕ‌ ಗುಡಗನಟ್ಟಿ ಮಾತನಾಡಿ, ಪ್ರತಿ ವರ್ಷ ಬೆಳಗಾವಿಯಲ್ಲಿ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸಿದರೆ, ಇನ್ನೊಂದೆಡೆ ನಾಡದ್ರೋಹಿಗಳು ಕರಾಳ ದಿನ ಆಚರಿಸುವ ಮೂಲಕ ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಕರಾಳ ದಿನಕ್ಕೆ ನಾಡದ್ರೋಹಿಗಳಿಗೆ ಅನುಮತಿ ನೀಡುವುದನ್ನು ಕರವೇ ಸಹಿಸುವುದಿಲ್ಲ. ಇದಕ್ಕೆ ಯಾವ ರೀತಿ ತಕ್ಕ ಉತ್ತರ ಕೊಡಬೇಕೆಂದು ಯೋಜನೆ ರೂಪಿಸುತ್ತೇವೆ. ಆ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾದರೆ ಜಿಲ್ಲಾಡಳಿತ ಪೊಲೀಸರು ನೇರ ಹೊಣೆ ಹೊರಬೇಕು ಎಂದು ಎಚ್ಚರಿಸಿದರು.

ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ ಮಾತನಾಡಿ, ಈ ಬಾರಿಯ ರಾಜ್ಯೋತ್ಸವಕ್ಕೆ 2 ಕೋಟಿ ವಿಶೇಷ ಅನುದಾನ ನೀಡಬೇಕು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಳಗಾವಿಯ ಸುವರ್ಣವಿಧಾನಸೌಧ ಮುಂಭಾಗದಲ್ಲಿ ಆಯೋಜಿಸುವ ಮೂಲಕ ಗಡಿ ಭಾಗದ ಕನ್ನಡಿಗರಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಸುರೇಶ ಗವನ್ನವರ, ಪ್ರಧಾನಕಾರ್ಯದರ್ಶಿ ಗಣೇಶ ರೋಕಡೆ, ಶಿವಾನಂದ ತಂಬಾಕಿ, ಸತೀಶ್ ಗಡದವರ, ದಶರಥ ಬನೋಶಿ, ನಿಂಗರಾಜ ಗುಂಡ್ಯಾಗೋಳ ಸೇರಿ ಮತ್ತಿತರರು ಇದ್ದರು.

ಇದನ್ನೂಓದಿ:ದಸರಾ 'ಯುವ ಸಂಭ್ರಮ'ಕ್ಕೆ ಸಚಿವ ಹೆಚ್.ಸಿ ಮಹದೇವಪ್ಪ ಚಾಲನೆ: ಸಮಾರಂಭಕ್ಕೆ ಸಿಂಹಪ್ರಿಯಾ ಸಾಕ್ಷಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.