ಚಿಕ್ಕೋಡಿ : ಅಂಕಲಿ ರಸ್ತೆ ಅಗಲೀಕರಣ ಸಲುವಾಗಿ ರಸ್ತೆ ಬದಿಯ ಕಟ್ಟಡಗಳನ್ನು ನೆಲಸಮಗೊಳಿಸಿ 3 ವರ್ಷಗಳು ಗತಿಸಿವೆ. ಆದ್ರೆ, ಇದುವರೆಗೂ ಮಾಸ್ಟರ್ ಪ್ಲಾನ್ ಪ್ರಕಾರ ಕಾಮಗಾರಿಯನ್ನು ಪೂರ್ಣಗೊಳಿಸದೇ ಇರುವುದನ್ನು ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ಲೋಕೋಪಯೋಗಿ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಅಧಿಕಾರಿಗಳು ಕೆಲಸ ಪೂರ್ಣಗೊಳಿಸದೇ ಇರುವುದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಇದರಿಂದ ರಸ್ತೆ ಬದಿ ವ್ಯಾಪಾರಸ್ಥರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ರು.
ಅಧಿಕಾರಿಗಳು ನಿಯಮ ಬಾಹಿರವಾಗಿ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿದ ಕಾರ್ಯಕರ್ತರು ಎಸ್ಟಿಮೆಟ್ ಪ್ರಕಾರ, ಈ ಮೊದಲಿದ್ದ ರಸ್ತೆ ಡಿವೈಡರ್‌ನಿಂದ ಸರಿಯಾಗಿ ಎರಡು ಬದಿ ಚರಂಡಿ ಮತ್ತು ರಸ್ತೆಯನ್ನು ನಿರ್ಮಿಸಬೇಕು. ನಿಯಮ ಹಾಗೂ ಮಾಸ್ಟರ್ ಪ್ಲಾನ್ ಪ್ರಕಾರ ಕಾಮಗಾರಿಗಳನ್ನು ಬೇಗನೆ ಮುಗಿಸದಿದ್ದರೆ ಬರುವ ದಿನಗಳಲ್ಲಿ ಲೋಕೋಪಯೋಗಿ ಮತ್ತು ಪಟ್ಟಣ ಪಂಚಾಯತಿ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಸಿದರು.