ETV Bharat / state

ದೇಶದಲ್ಲೇ ಕರ್ನಾಟಕ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯ ಆಗಬೇಕು: ಸಿಎಂ ಸಿದ್ದರಾಮಯ್ಯ

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ದಿನ 2023 ನಿಮಿತ್ತ ಬೆಂಗಳೂರಿನಲ್ಲಿ ಜನವರಿ 5, 6, 7 ರಂದು ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ. ಇಂದು ಬೆಳಗಾವಿಯಲ್ಲಿ ನಡೆದ ಸಿರಿಧಾನ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

CM Siddaramaiah spoke at the preliminary program of the millets Mela.
ಸಿರಿಧಾನ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
author img

By ETV Bharat Karnataka Team

Published : Dec 14, 2023, 7:02 PM IST

ಬೆಳಗಾವಿ(ಬೆಂಗಳೂರು): ಸಿರಿಧಾನ್ಯ ಬೆಳೆಯುವಲ್ಲಿ ಕರ್ನಾಟಕ ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಸಿರಿಧಾನ್ಯ ಬಳಕೆ ಜಾಗೃತಿ ಅಗತ್ಯ: ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ದಿನ 2023 ಪ್ರಯುಕ್ತ ಕೃಷಿ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಪೂರ್ವಭಾವಿಯಾಗಿ ಸಾವಯವ ಕೃಷಿ ಸಿರಿಧಾನ್ಯ ಮೇಳದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ.

ಸಾವಯವ ಕೃಷಿ: ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯ ದಿನ ಆಚರಿಸಲಾಗುತ್ತಿದೆ. ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಅವುಗಳಿಗೆ ಮಾರುಕಟ್ಟೆ ಒದಗಿಸಬೇಕು. ಕಳೆದ 20 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಲಾಗುತ್ತಿದೆ. ಅದಕ್ಕೆ ಕೃಷಿ ಇಲಾಖೆಯರಿಗೆ ಪೂರಕ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ಜನವರಿ 5ರಂದು ಸಿರಿಧಾನ್ಯ ಮೇಳ: ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಜನವರಿ 5, 6, 7 ರಂದು ಸಿರಿಧಾನ್ಯ ಮೇಳ ಏರ್ಪಡಿಸಲಾಗಿದೆ. ನಮ್ಮ ಪೂರ್ವಜರು ಶತ ಶತಮಾನಗಳಿಂದ ಸಾವಯಕ ಕೃಷಿ ಅನುಸರಿಸಿಕೊಂಡು ಬಂದಿದ್ದಾರೆ. ಆದರೆ, ಇಂದು ನಾವು ರಾಸಾಯನಿಕ ಬಳಕೆ ಮಾಡುತ್ತ ಸಾವಯವ ಕೃಷಿ ಮರೆಯುತ್ತಿದ್ದೇವೆ. ಆದ ಕಾರಣ ಸಾವಯವ ಕೃಷಿ, ಸಿರಿಧಾನ್ಯ ಬೆಳೆಯಲು ಸರ್ಕಾರದಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.

ಸಿರಿಧಾನ್ಯ ಆರೋಗ್ಯಕ್ಕೆ ಒಳ್ಳೆಯದು: ಮೊದಲನೇ ಮೇಳ ನಡೆದಿದ್ದು 2017ರಲ್ಲಿ, ಆಗ ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದರು. 5 ವರ್ಷ ಸತತವಾಗಿ ಏರ್ಪಾಡು ಮಾಡಲಾಗಿತು. ಕೋವಿಡ್ ಸಂದರ್ಭದಲ್ಲಿ ಮಾಡಲಾಗಿರಲಿಲ್ಲ. ಸಿರಿಧಾನ್ಯ ಬಹಳ ಬೇಡಿಕೆಯಲ್ಲಿರುವ ವಸ್ತು. ಮೊದಲು ರಾಗಿ, ಜೋಳ, ನವಣೆ, ಸಾಮೆ, ಆರ್ಕವನ್ನು ಬೆಳೆಯುತ್ತಿದ್ದೆವು. ನಂತರ ಕಡಿಮೆಯಾಗುತ್ತಾ ಬಂದಿತು.

ಮಳೆ ಕಡಿಮೆಯಾಗುವ ಪ್ರದೇಶಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಇತ್ತೀಚೆಗೆ ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದು ಎಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ. ಇದರಲ್ಲಿ ಕಾರ್ಬೊಹೈಡ್ರೇಟ್ಸ್ ಕಡಿಮೆಯಿದ್ದು, ಲವಣಾಂಶ ಮತ್ತು ನಾರಿನಂಶ ಹೇರಳವಾಗಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ ಎಂದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ, ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಉಪಸ್ಥಿತರಿದ್ದರು.

ಇದನ್ನೂಓದಿ:ನಾಲ್ಕು ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಮೂಲ ಸೌಕರ್ಯ: ಸಚಿವ ಕೆ ಜೆ ಜಾರ್ಜ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.