ಬೆಂಗಳೂರು: ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ಹಿನ್ನೆಲೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆ ದೆಹಲಿಯ ಗೃಹ ಸಚಿವರ ಸರ್ಕಾರಿ ನಿವಾಸದಲ್ಲಿ ಸಂಜೆ 7ಕ್ಕೆ ಆರಂಭವಾಗಲಿದೆ.
ಸಂಜೆ ನಡೆಯುವ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಸೇರಿ ಹಿರಿಯ ಸಚಿವರು ಭಾಗಿಯಾಗಲಿದ್ದಾರೆ. ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಮಹಾ ವಿಕಾಸ ಅಘಾಡಿ ನಿಯೋಗ ಆಗ್ರಹಿಸಿತ್ತು.
ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ದಿನಗಣನೇ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಶಿವಸೇನೆಯ ಕಿಡಿಗೇಡಿಗಳು ಕರ್ನಾಟಕದ ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಮಸಿ ಬಳಿದಿದ್ದರು. ಶಿವಸೇನೆಯ ಉದ್ಧಟತನಕ್ಕೆ ಕರ್ನಾಟಕದಲ್ಲಿಯೂ ಮಹಾರಾಷ್ಟ್ರದ ವಾಹನಗಳಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ಎರಡು ರಾಜ್ಯಗಳ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಇತ್ತೀಚಿಗೆ ಮಹಾವಿಕಾಸ ಅಘಾಡಿ ಸಂಸದರು ಅಮಿತ್ ಶಾರನ್ನು ಭೇಟಿಯಾಗಿ ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಮನವಿ ಸಲ್ಲಿಸಿತ್ತು. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದು ಮಹತ್ವ ಸಭೆ ನಡೆಯಲಿದೆ. ಸಭೆಯಲ್ಲಿ ಎರಡು ರಾಜ್ಯಗಳ ಸಿಎಂಗಳಿಗೆ ಗೃಹ ಸಚಿವರು ನೀಡುವ ಸೂಚನೆ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಗಡಿ ವಿಚಾರ ಮುಂದಿಟ್ಟುಕೊಂಡು ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಎನ್‌ಸಿಪಿ, ಕಾಂಗ್ರೆಸ್ ಠಾಕ್ರೆ ಬಣ ಹೋರಾಟ ನಡೆಸುತ್ತಿದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಕೇಂದ್ರ ಗೃಹ ಸಚಿವರ ಮೇಲೆ ತೀವ್ರ ಒತ್ತಡ ಹೇರುತ್ತಿದೆ. ಇತ್ತ ಸಭೆಯಲ್ಲಿ ನಾಡಿನ ಹಿತಾಸಕ್ತಿ ಸಂಬಂಧ ಬಿಗಿಪಟ್ಟು ಹಿಡಿಯಲು ಸಿಎಂ ಬೊಮ್ಮಾಯಿ ನಿರ್ಧಾರ ಕೈಗೊಂಡಿದ್ದಾರೆ.
ಓದಿ: N vs IND 1st test: ಅನುಭವಿ ತಂಡದೊಂದಿಗೆ ಟಾಸ್ಗೆದ್ದು ಬ್ಯಾಟಿಂಗ್ ಆಯ್ದಕೊಂಡ ರಾಹುಲ್