ETV Bharat / state

ಕಾವೇರಿ, ಮಹದಾಯಿ ವಿಚಾರದಲ್ಲಿ ರಾಜಕೀಯ ಡ್ರಾಮಾ ಮಾಡಬಾರದು: ಸರ್ಕಾರದ ವಿರುದ್ಧ ಕೋಡಿಹಳ್ಳಿ ಕಿಡಿ

ಇಡೀ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡಿದ ಹಿನ್ನೆಲೆಯಲ್ಲಿ ಅದನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಸಾರಿಗೆ ನೌಕರರಿಗೆ ಮಲತಾಯಿ ಧೋರಣೆ ಮುಂದುವರೆಯಬಾರದು. ಆ.27ರಂದು ಸಾರಿಗೆ ನೌಕರರ ಸಭೆ ಕರೆಯಲಾಗಿದೆ. ಸೆ.6ರಿಂದ ಯಾವ ರೀತಿ ಹೋರಾಟ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದ್ದಾರೆ.

ಬೆಳಗಾವಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ

author img

By

Published : Aug 25, 2021, 6:49 PM IST

ಬೆಳಗಾವಿ : ಕಾವೇರಿ, ಮಹದಾಯಿ ಪ್ರಕರಣ ರಾಜಕೀಯ ಪಕ್ಷಗಳು ರಾಜಕೀಯ ಡ್ರಾಮಾ ಮಾಡಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷ್ಣಾಗೆ ಸಂಬಂಧಿಸಿದಂತೆ ಸಕಾಲಕ್ಕೆ‌ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಈಗಾಗಲೇ ಸರಕಾರ ಹೇಳಿದೆ. ಕೃಷ್ಣಾ ನ್ಯಾಯಾಧಿಕರಣದ ತೀರ್ಪು ಬಂದರೂ ದೊಡ್ಡ ಪ್ರಮಾಣದಲ್ಲಿ ಕೃಷ್ಣಾ ನೀರನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಾಗದೇ ಯೋಜನೆಯನ್ನು ಅನುಷ್ಠಾನ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ನೀರಾವರಿ ಯೋಜನೆಗಳ ಕುರಿತಂತೆ ಕೋಡಿಹಳ್ಳಿ ಚಂದ್ರಶೇಖರ್​ ಮಾತನಾಡಿರುವುದು..

ಕಾವೇರಿ ನೀರನ್ನು ಬಳಕೆ ಮಾಡಲು ಮೇಕೆದಾಟು ಯೋಜನೆಯಲ್ಲಿ ಅನುಷ್ಠಾನ ಮಾಡಿದರೆ ನಾವು ಆ ನೀರು ಬಳಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಮಹದಾಯಿ ನದಿ ವಿಚಾರವನ್ನು ಅಂತಾರಾಷ್ಟ್ರೀಯ ಸಮಸ್ಯೆಯಾಗಿ ಮಾರ್ಪಾಡು ಮಾಡಿದ್ದಾರೆ‌.

ಆದ್ದರಿಂದ ಗೋವಾದವರು ಈಗ ಪ್ರಶ್ನೆ ಮಾಡಲು ಪ್ರಾರಂಭ ಮಾಡಿದ್ದಾರೆ‌. ಮಹದಾಯಿ ಮತ್ತು ಕಾವೇರಿ ವಿಚಾರದಲ್ಲಿ ಸರಕಾರದ ವಿಳಂಬ ನೀತಿ ಮುಂದುವರಿದರೆ ನಾವೇ ಅಡಿಗಲ್ಲು ಹಾಕಿ ಕಾಮಗಾರಿ ಪ್ರಾರಂಭ ಮಾಡುವುದಾಗಿ ಸರಕಾರಕ್ಕೆ ಎಚ್ಚರಿಕೆ ನೀಡಿದರು‌.

ಕೊರೊನಾದಿಂದಾಗಿ ಹೋರಾಟ ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ

ಇಡೀ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡಿದ ಹಿನ್ನೆಲೆಯಲ್ಲಿ ಅದನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಸಾರಿಗೆ ನೌಕರರಿಗೆ ಮಲತಾಯಿ ಧೋರಣೆ ಮುಂದುವರೆಯಬಾರದು. ಆ.27ರಂದು ಸಾರಿಗೆ ನೌಕರರ ಸಭೆ ಕರೆಯಲಾಗಿದೆ. ಸೆ.6ರಿಂದ ಯಾವ ರೀತಿ ಹೋರಾಟ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು‌.

ಸಾರಿಗೆ ನೌಕರರಿಗೆ ಪ್ರಮುಖ ಬೇಡಿಕೆಯನ್ನು ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿಯೇ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಪ್ರತಿಭಟನೆಯಲ್ಲಿ ಗುರುತಿಸಿಕೊಂಡವರಿಗೆ ಸರಕಾರ ಅವರನ್ನು ಕೆಲಸದಿಂದ ವಜಾ ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು‌.

ಇದನ್ನೂ ಓದಿ : ಮೈಸೂರು: ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ Gangrape

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.