ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದ ಮುಂಬೈಯಲ್ಲಿದ್ದ ಕರ್ನಾಟಕದ ವಿವಿಧ ಜಿಲ್ಲೆಗಳ ವಲಸಿಗ ಕಾರ್ಮಿಕರ ಪೈಕಿ 30ಕ್ಕೂ ಹೆಚ್ಚು ಕಾರ್ಮಿಕರು ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಸಿಲುಕಿದ್ದಾರೆ.
ಮಹಾರಾಷ್ಟ್ರದಿಂದ ಸುಮಾರು 30ಕ್ಕೂ ಹೆಚ್ಚು ಕಾರ್ಮಿಕರು ಕೊಗನೊಳಿ ಟೂಲ್ ನಾಕಾ ಬಳಿ ಬಂದಿದ್ದು, ಇದೀಗ ಕರ್ನಾಟಕ ಅಧಿಕಾರಿಗಳು ಮರಳಿ ಮಹಾರಾಷ್ಟ್ರಕ್ಕೆ ಹೋಗಲು ಸೂಚಿಸಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.
ರಾಜ್ಯದ ಒಳ ಬರಲು ಅನುಮತಿ ನೀಡಿ. ಬೇಕಾದರೇ 14 ದಿನ ನಮ್ಮನ್ನು ಕ್ವಾರಂಟೈನ್ಗೆ ಒಳಪಡಿಸಿ. ನಾವು ಯಾವುದೇ ಕಾರಣಕ್ಕೂ ಮತ್ತೆ ಮಹಾರಾಷ್ಟ್ರಕ್ಕೆ ತೆರಳುವುದಿಲ್ಲ. ಅಲ್ಲಿ ನಮಗೆ ಯಾವುದೇ ವ್ಯವಸ್ಥೆ ಇಲ್ಲದೆ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮನ್ನು ಆದಷ್ಟು ಬೇಗ ನಮ್ಮ ಊರಿಗೆ ಕಳುಹಿಸಿಕೊಡಿ ಎಂದು ಅಳಲು ತೋಡಿಕೊಂಡಿದ್ದಾರೆ.