ETV Bharat / state

KMF Recruitment: ಬೆಳಗಾವಿ ಹಾಲು ಉತ್ಪಾದಕರ ಸಂಘದಲ್ಲಿದೆ ವಿವಿಧ ಉದ್ಯೋಗ; 46 ಹುದ್ದೆ ನೇಮಕಾತಿ - ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ

ಬೆಮುಲ್​ನ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

KMF BEMUL Recruitment notification for 46 post

author img

By ETV Bharat Karnataka Team

Published : Aug 30, 2023, 1:13 PM IST

ಕರ್ನಾಟಕ ಹಾಲು ಉತ್ಪಾದಕರ ಸಂಘದಿಂದ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಮುಲ್​ನ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್​ ಮ್ಯಾನೇಜರ್​, ಟೆಕ್ನಿಕಲ್​ ಆಫೀಸರ್​ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ:

ಸಹಾಯಕ ವ್ಯವಸ್ಥಾಪಕರು 2-

ಸಹಾಯಕ ವ್ಯವಸ್ಥಾಪಕ (ವಿತ್ತ) 1,

ತಾಂತ್ರಿಕ ಅಧಿಕಾರಿ 7,

ವಿಸ್ತರಣಾಧಿಕಾರಿ ದರ್ಜೆ 3- 10,

ಆಡಳಿತ ಸಹಾಯಕ ದರ್ಜೆ2- 5,

ಲೆಕ್ಕ ಸಹಾಯಕ ದರ್ಜೆ 2 - 5,

ಮಾರುಕಟ್ಟೆ ಸಹಾಯಕ ದರ್ಜೆ -2 2,

ಕೆಮಿಸ್ಟ್​ ದರ್ಜೆ 2 -4,

ಕಿರಿಯ ತಾಂತ್ರಿಕರು -9

ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಎಂಬಿಎ, ಎಂಕಾಂ, ಸ್ನಾತಕೋತ್ತರ ಪದವಿ, ಬಿಎ, ಬಿಕಾಂ, ಬಿಸಿಎ, ಬಿಎಸ್ಸಿ, ಎಸ್​ಎಸ್​ಎಲ್​ಸಿ, ಐಟಿಐ ಪದವಿಯನ್ನು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ದಾಟಿರಬಾರದು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಹುದ್ದೆಗೆ ಅನುಸಾರವಾಗಿ ವೇತನ ನಿಗದಿಸಲಾಗಿದ್ದು, 21,400 ರೂನಿಂದ 97,100 ರೂ.ವರೆಗೆ ವೇತನವಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ನಿಗದಿಸಲಾಗಿದ್ದು, ಇದನ್ನೂ ಆನ್​ಲೈನ್​ ಮೂಲಕ ಭರ್ತಿ ಮಾಡಬೇಕಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಈ ಹುದ್ದೆಗೆ ಆಗಸ್ಟ್​​ 28ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 26 ಆಗಿದೆ,

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ bemul.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ. 9108538218 ಈ ಸಹಾಯವಾಣಿಗೂ ಕರೆ ಮಾಡಬಹುದಾಗಿದೆ.

ಇದನ್ನೂ ಓದಿ: KPSC Recruitment: 230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.