ETV Bharat / state

ಬೆಳಗಾವಿ: ಮಗಳಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ ತಂದೆ ಸೇರಿ ನಾಲ್ವರಿಗೆ ಚಾಕು ಇರಿತ

ಬಾಲಕಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ನಾಲ್ವರಿಗೆ ಚಾಕು ಇರಿದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

knife-stabbed-for-four-people-in-belagavi
ಬೆಳಗಾವಿ: ಮಗಳಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ ತಂದೆ ಸೇರಿ ನಾಲ್ವರಿಗೆ ಚಾಕು ಇರಿತ
author img

By

Published : Nov 9, 2022, 7:19 AM IST

ಬೆಳಗಾವಿ: ಬಾಲಕಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ನಾಲ್ವರಿಗೆ ಚಾಕು ಇರಿದಿರುವ ಘಟನೆ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ನಡೆದಿದೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಮಂಗಳವಾರ ಸಂಜೆ ತಮ್ಮ ಮಗಳಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಲು ತಂದೆ ಹಿರಿಯರ ಸಮೇತ ಹೋಗಿದ್ದರು. 17 ವರ್ಷದ ಬಾಲಕ ಹಾಗೂ ಆತನ ಸ್ನೇಹಿತರಿಗೆ ಬುದ್ದಿ ಹೇಳಲು ಹೋದಾಗ ಜಗಳ ನಡೆದು ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಬಾಲಕಿಯ ತಂದೆಯೊಂದಿಗಿದ್ದ ನಾಲ್ವರ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿಯಲಾಗಿದೆ‌ ಎಂದು ತಿಳಿದುಬಂದಿದೆ.

ಅಲ್ಲದೆ, ಆರೋಪಿ ಕಡೆಯ ಓರ್ವ ವ್ಯಕ್ತಿಗೂ ಗಾಯವಾಗಿದೆ. ರಫೀಕ್ ಕುರಿಕೊಪ್ಪ, ಸಾಹಿದ್ ಸೌದಾಗರ್, ಅತಾಹುಲ್ಲಾ ಹುಬ್ಬಳ್ಳಿ, ಮೆಹಬೂಬ್ ಹುಬ್ಬಳ್ಳಿ ಎಂಬುವರು ಚಾಕು ಇರಿತಕ್ಕೆ ಒಳಗಾದವರು. ಜಗಳ ಬಿಡಿಸಲು ಹೋದ ರವಿ ತಿಮ್ಮನ್ನರ್ ಎಂಬುವರ ಮೇಲೆಯೂ ಹಲ್ಲೆ ನಡೆಸಲಾಗಿದೆ.

ಗಾಯಾಳುಗಳಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆ ಬಳಿ ಓರ್ವ ಎಸಿಪಿ, ಇಬ್ಬರು ಸಿಪಿಐ ಸೇರಿ 20ಕ್ಕೂ ಹೆಚ್ಚು ಜನ ಪೊಲೀಸರಿಂದ ಬಂದೋಬಸ್ತ್ ಒದಗಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಅನ್ಯ ಜಾತಿಯ ಯುವಕನ ಪ್ರೀತಿಸಿದ ಮಗಳನ್ನು ಕೊಲೆಗೈದ ತಂದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.