ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಓರ್ವ ಯುವಕನಿಗೆ ಚೂರಿ ಇರಿದಿರುವ ಘಟನೆ ತಡರಾತ್ರಿ ನಡೆದಿದೆ.
15 ಜನರ ತಂಡ ಯುವಕನೋರ್ವನಿಗೆ ಚಾಕುವಿನಿಂದ ಮನಬಂದಂತೆ ಇರಿದಿದೆ. ಕೆ.ಹೆಚ್. ಕಂಗ್ರಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಜಾಧವ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನ ದೇಹದ ಬಹುತೇಕ ಭಾಗಕ್ಕೆ ಚೂರಿಯಿಂದ ಇರಿಯಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ರಾಹುಲ್ ಜಾಧವ್ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 15 ಜನರ ಗುಂಪು ರಾಹುಲ್ ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.