ETV Bharat / state

ಘಟಪ್ರಭಾ ‌ನದಿಗೆ ಒಳಹರಿವು ಹೆಚ್ಚಳ: ಕೊಣ್ಣೂರು ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿದ ನೀರು, ಸೇತುವೆಗಳು ಜಲಾವೃತ

ಬೆಳಗಾವಿಯಲ್ಲಿ ಭಾರಿ ಮಳೆ ಹಿನ್ನೆಲೆ ಘಟಪ್ರಭಾ ‌ನದಿಯ ಒಳಹರಿವು ಹೆಚ್ಚಳವಾದ ಹಿನ್ನೆಲೆ ಗೋಕಾಕ್‌ ನಗರದ ಮಟನ್ ಮಾರ್ಕೆಟ್, ಭೋಜಗರ್​ಗಲ್ಲಿ, ಉಪ್ಪಾರ ಗಲ್ಲಿಯಲ್ಲಿ ಮನೆಗಳು ಜಲಾವೃತಗೊಂಡಿವೆ.

konnuru market
ಕೊಣ್ಣೂರು ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿದ ನೀರು
author img

By

Published : Jul 24, 2021, 9:19 AM IST

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಬೆಳಗಾವಿಯಲ್ಲಿ ಧಾರಾಕಾರ ಮಳೆಯಿಂದ ಘಟಪ್ರಭಾ ನದಿಯ ಒಳಹರಿವು ಪ್ರಮಾಣ 1 ಲಕ್ಷ 10 ಸಾವಿರ ಕ್ಯೂಸೆಕ್ ದಾಟಿದೆ. ನದಿ ಪಾತ್ರದಲ್ಲಿರುವ ಗೋಕಾಕ್ ತಾಲೂಕಿನ ಕೊಣ್ಣೂರು ಮಾರುಕಟ್ಟೆ ಪ್ರದೇಶಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಕೊಣ್ಣೂರು ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿದ ನೀರು

ಕೊಣ್ಣೂರು ಪಟ್ಟಣದ ಮಾರುಕಟ್ಟೆ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಗೋಕಾಕ್, ಮೂಡಲಗಿ ತಾಲೂಕಿನ ನದಿತಟದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಗೋಕಾಕ್ ನಗರದ ಲೋಳಸೂರು ಸೇತುವೆ ಜಲಾವೃತಗೊಂಡಿದ್ದು, ಘಟಪ್ರಭಾ-ಯರಗಟ್ಟಿ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ. ಗೋಕಾಕ್‌ ನಗರದ ಮಟನ್ ಮಾರ್ಕೆಟ್, ಭೋಜಗರ್​​ನಲ್ಲಿ, ಉಪ್ಪಾರ ಗಲ್ಲಿಯಲ್ಲಿ ಮನೆಗಳು ಜಲಾವೃತಗೊಂಡಿವೆ.

ಮಹಾರಾಷ್ಟ್ರಕ್ಕೆ ತೆರಳುವ ಪ್ರಮುಖ ಸಂಪರ್ಕ ಸೇತುವೆ ಜಲಾವೃತ...!

konnuru market
ಸೇತುವೆಗಳು ಜಲಾವೃತ

ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಅಪಾಯ ಮಟ್ಟದಲ್ಲಿ ಧೂದ್​ಗಂಗಾ ನದಿ‌ ಹರಿಯುತ್ತಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣ ಹಾಗೂ ಹೊರವಲಯದ ನಗರ ಪ್ರದೇಶಗಳಿಗೆ ನೀರು ನುಗ್ಗಿದ್ದು, ಮಹಾರಾಷ್ಟ್ರಕ್ಕೆ ತೆರಳುವ ಪ್ರಮುಖ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಜಾನುವಾರಗಳನ್ನು ಸುರಕ್ಷಿತ ಸ್ಥಳಕ್ಕೆ ಜನ ಸ್ಥಳಾಂತರಿಸುತ್ತಿದ್ದು, ದಿನದಿಂದ ದಿನಕ್ಕೆ ಕೃಷ್ಣೆ ತನ್ನ ಒಡಲನ್ನು ಬಿಟ್ಟು ಹರಿಯುತ್ತಿದೆ. ಹೀಗಾಗಿ ನದಿ ತೀರದ ಗ್ರಾಮಗಳ ಜನರು ಮುನೆಚ್ಚರಿಯಿಂದಾಗಿ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.