ಚಿಕ್ಕೋಡಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ತಾಲೂಕಿನ ಗ್ರಾಮೀಣ ಭಾಗದ ರೋಗಿಗಳ ಅನುಕೂಲಕ್ಕಾಗಿ ಕೊರೊನಾ ಆಸ್ಪತ್ರೆಯನ್ನು ಪ್ರಾರಂಭಿಸಿರುವ ಡಾ. ಎನ್. ಎ. ಮಗದುಮ್ಮ ಅವರ ಕಾರ್ಯ ಶ್ಲಾಘನೀಯ ಎಂದು ಚಿಕ್ಕೋಡಿಯ ಸಂಪಾದನಾ ಮಠದ ಸಂಪಾದನಾ ಸ್ವಾಮೀಜಿ ಹೇಳಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನೂತನ ಕೋವಿಡ್ ಆಸ್ಪತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ, ರಾಜ್ಯದಲ್ಲಿ ಕೊರೊನಾದಿಂದ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಗ್ರಾಮೀಣ ಭಾಗದಲ್ಲಿ ಕೋವಿಡ್ ಆಸ್ಪತ್ರೆಯನ್ನು ಪ್ರಾರಂಭಿಸಿರುವ ಡಾ. ಎನ್.ಎ. ಮಗುದುಮ್ಮ ಅವರ ಕಾರ್ಯ ಶ್ಲಾಘನೀಯ ಎಂದು ಸ್ವಾಮೀಜಿ ಹೇಳಿದರು.
20 ಕ್ಕೂ ಹೆಚ್ಚು ಹಾಸಿಗೆಯುಳ್ಳ ಕೋವಿಡ್ ಸೆಂಟರ್ ಇಂದು ಪ್ರಾರಂಭಿಸಿದ್ದು, ಇದರಿಂದ ಗ್ರಾಮೀಣ ಭಾಗದ ಜನರಿಗೆ ಚಿಕಿತ್ಸೆ ಪಡೆಯಲು ಅನುಕೂಲವಾಗಿದೆ.