ETV Bharat / state

ಸಿಎಂ ಬೊಮ್ಮಾಯಿ ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು: ಸತೀಶ್ ಜಾರಕಿಹೊಳಿ - KPCC Working president statement about Mysore gang rape

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲೂ ಸಿಬ್ಬಂದಿಯ ಕೊರತೆ ಇದೆ. ಇದರಿಂದ ಪೊಲೀಸರು ತಮ್ಮ ದಿನನಿತ್ಯದ ಕರ್ತವ್ಯವನ್ನು ಒತ್ತಡದಲ್ಲಿ ನಿಭಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
author img

By

Published : Aug 28, 2021, 7:26 PM IST

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾವಣೆ ಮಾಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲೂ ಸಿಬ್ಬಂದಿಯ ಕೊರತೆ ಇದೆ. ಇದರಿಂದ ಪೊಲೀಸರು ತಮ್ಮ ದಿನನಿತ್ಯದ ಕರ್ತವ್ಯವನ್ನು ಒತ್ತಡದಲ್ಲಿ ನಿಭಾಯಿಸುತ್ತಿದ್ದಾರೆ. ಹೀಗಾಗಿ, ಹೆಚ್ಚು ಸಿಬ್ಬಂದಿಯನ್ನು ಸರ್ಕಾರ ನೇಮಿಸಿಕೊಳ್ಳಬೇಕು. ಹೊಸ ಪೊಲೀಸ್ ಠಾಣೆಗಳನ್ನು ತೆರೆಯಬೇಕು. ತಾಂತ್ರಿಕವಾಗಿಯೂ ಇಲಾಖೆಯಲ್ಲಿ ಸುಧಾರಣೆಯಾಗಬೇಕಿದೆ ಎಂದು ಹೇಳಿದರು.

ಗೃಹ ಸಚಿವರ ಹೇಳಿಕೆ ಅವರ ಮೇಲೆಯೇ ವ್ಯತಿರಿಕ್ತ ಪರಿಣಾಮ ಬೀರಿದೆ. ಬಿಜೆಪಿ ಶಾಸಕರು, ಸಚಿವರು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಹೊಸದಲ್ಲ. ಈ ಹಿಂದೆಯೂ ಹಲವು ನಾಯಕರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಎಂದು ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಮುಖಂಡರು ಪ್ರಚಾರಕ್ಕೆ ಬರಲಿದ್ದಾರೆ:

ಬೆಳಗಾವಿ ಚುನಾವಣಾ ಉಸ್ತುವಾರಿಗಳಾದ ಮಾಜಿ ಸಚಿವ ಎಂ.ಬಿ.ಪಾಟೀಲ, ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ನಾಸಿರ್ ಹುಸೇನ್ ಸೇರಿ ಇನ್ನಿತರ ಮುಖಂಡರು ನಾಳೆಯಿಂದ ಪ್ರಚಾರಕ್ಕೆ ಬರಲಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆಳಗಾವಿಗೆ ಏನು ಕೊಡುಗೆ ನೀಡಲಾಗಿದೆ ಎಂಬುದನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತೇವೆ ಎಂದರು.

ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಗರಕ್ಕೆ ಆಗಮಿಸುತ್ತಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಮಿಷನ್-45 ಇದ್ದದ್ದು 4 ಆದರೂ ಆಗಬಹುದು:

ಬಿಜೆಪಿಯವರದ್ದು ಯಾವಾಗಲೂ ಮಿಷನ್ ಇರುತ್ತದೆ. ಅವರು ಪಾಲಿಕೆ ಚುನಾವಣೆಯಲ್ಲಿ ಮಿಷನ್-45 ಇಟ್ಟುಕೊಂಡಿದ್ದಾರೆ. ಯಾರಿಗೆ ಗೊತ್ತು 45 ಇದ್ದದ್ದು 4 ಆದರೂ ಆಗಬಹುದು ಎಂದು ವ್ಯಂಗ್ಯವಾಡಿದರು.

ಚುನಾವಣೆಯ ನಂತರ ಸೆ.6 ರಂದು ಸ್ಪಷ್ಟ ಚಿತ್ರಣ ದೊರಕಲಿದೆ. ಎ-ಟೀಮ್, ಬಿ-ಟೀಮ್ ಯಾವುದು? ಯಾರು, ಯಾರನ್ನು ಬೆಂಬಲಿಸಿದ್ದಾರೆ ಎಂಬುದು ಆಗಲೇ ಗೊತ್ತಾಗಲಿದೆ. ನಾವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಪ್ರಯತ್ನಿಸುತ್ತೇವೆ ಎಂದರು.

ಕಾರ್ಯಕರ್ತರೇ ನಮ್ಮ ಶಕ್ತಿ:

ಪಕ್ಷ ಕೊನೆ ಗಳಿಗೆಯಲ್ಲಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದರಿಂದ ಸಿದ್ಧತೆಯಲ್ಲಿ ಸ್ವಲ್ಪ ಗೊಂದಲವಾಗಿತ್ತು. ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಕೆಲಸ ಮಾಡಿದ್ದ ನಮ್ಮ ತಂಡ ಈಗಲೂ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ನಾವು ಶಿಫಾರಸ್ಸು ಮಾಡಿದವರಿಗೆ ಟಿಕೆಟ್ ನೀಡಲಾಗಿದೆ. ಕಾರ್ಯಕರ್ತರೇ ನಮ್ಮ ಶಕ್ತಿ ಎಂದು ಹೇಳಿದರು.

ಓದಿ: ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಸೋಮಶೇಖರ್, ಸಂಸದ ಪ್ರತಾಪ್​​​ ಸಿಂಹ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.