ಬೆಂಗಳೂರು/ ಬೆಳಗಾವಿ : ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶ್ ಕುಮಾರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಇಂಧನ ಸಚಿವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದ್ದು, ಫಲಿತಾಂಶ ಪ್ರಕಟಿಸಲಾಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನದಲ್ಲಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ.
ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ, ಜನವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕ ಸುರೇಶ್ಕುಮಾರ್ ಅವರು, ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಚಾತಕ ಪಕ್ಷಿಯಂತೆ ಕಾಯುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮವಹಿಸುವಂತೆ ಅವರು ಸಚಿವರಲ್ಲಿ ಕೋರಿದ್ದರು.
ಇದನ್ನೂ ಓದಿ : ಅಲ್ಪಸಂಖ್ಯಾತರ ವಿವಿಧ ಯೋಜನೆಗಳಿಗೆ ಹಣ ಮಂಜೂರು ಮಾಡುತ್ತೇವೆ: ಸಿಎಂ ಭರವಸೆ