ETV Bharat / state

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಹುಬ್ಬಳ್ಳಿಯಲ್ಲಿ ಕಿಂಗ್‌ಪಿನ್‌ ಅರೆಸ್ಟ್ - ಈಟಿವಿ ಭಾರತ್​ ಕನ್ನಡ

ಕೆಪಿಟಿಸಿಎಲ್ ಕಿರಿಯ ಅಭಿಯಂತರ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕಿಂಗ್​ ಪಿನ್​ ಎಂದೇ ಕರೆಸಿಕೊಳ್ಳುತ್ತಿದ್ದ ಆರೋಪಿ ಸಂಜೀವ ಲಕ್ಷ್ಮಣ ಭಂಡಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

Etv Bharatkptcl-illegal-exam-kingpin-accused-sanjeev-arrested-in-belagavi
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದ ಹುಬ್ಬಳ್ಳಿಯಲ್ಲಿ ಕಿಂಗ್‌ಪಿನ್‌ ಅರೆಸ್ಟ್
author img

By

Published : Sep 3, 2022, 9:16 AM IST

Updated : Sep 3, 2022, 10:19 AM IST

ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಪಿಟಿಸಿಎಲ್ ಕಿರಿಯ ಅಭಿಯಂತರ(ಜೆಇ)ಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 13ಕ್ಕೇರಿದೆ. ಈ ಪರೀಕ್ಷೆಯ ಅಕ್ರಮದ ಕಿಂಗ್​ ಪಿನ್​ ಎಂದೇ ಕರೆಯಲಾಗುತ್ತಿದ್ದ ಜಿಲ್ಲೆಯ ಗೋಕಾಕ್​ ತಾಲೂಕಿನ ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ.

ಬಂಧಿತ ಆರೋಪಿಯನ್ನು ಪೊಲೀಸರು ಗೋಕಾಕ್​ನ ಪ್ರಿನ್ಸಿಪಲ್ ಜೆಎಂಎಫ್‌ಸಿಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು 7ದಿನಗಳ ವರೆಗೆ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಕಳೆದ‌ ಆ.07ರಂದು ಕೆಪಿಟಿಸಿಎಲ್‌ನ ಕಿರಿಯ ಅಭಿಯಂತರ (ಜೆಇ) ನೇಮಕಾತಿ ಪರೀಕ್ಷೆ ಸಮಯದಲ್ಲಿ ಗೋಕಾಕ್​ ನಗರದ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಆರೋಪಿ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ ಎಂಬಾತ ಸ್ಮಾರ್ಟ್ ವಾಚ್‌ನ ಕ್ಯಾಮೆರಾ ಮೂಲಕ ಪ್ರಶ್ನೆಪತ್ರಿಕೆಯನ್ನು ಫೋಟೋ ತೆಗೆದು ಟೆಲಿಗ್ರಾಂ ಮೂಲಕ ಪ್ರಮುಖ ಆರೋಪಿ ಸಂಜೀವ ಭಂಡಾರಿಗೆ ರವಾನಿಸಿದ್ದರು ಎನ್ನಲಾಗ್ತಿದೆ. ಈ ಅಕ್ರಮದ ಕುರಿತು ಗೋಕಾಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸಂಜೀವ ಭಂಡಾರಿ ತಲೆಮರೆಸಿಕೊಂಡಿದ್ದರು. ಅಲ್ಲದೇ ವಕೀಲರ ಮೂಲಕ ಎರಡು ಬಾರಿ ಜಾಮೀನಿಗಾಗಿ ಸಂಜು ಭಂಡಾರಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಆರೋಪಿಯ ಅರ್ಜಿಯನ್ನು ತಿರಸ್ಕರಿಸಿತು.

ಇತ್ತ, ಆರೋಪಿ ಸಂಜೀವ ಭಂಡಾರಿ ಪರೀಕ್ಷಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬ್ಲೂಟೂತ್‌ ಡಿವೈಸ್​ಗಳನ್ನು ರವಾನಿಸುತ್ತಿದ್ದರು. ಈಗ ಪೊಲೀಸರು ಬ್ಲೂಟೂತ್ ಡಿವೈಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಸಂಜೀವ ಪೊಲೀಸ್ ಕಾನ್ಸ್​​ಟೇಬಲ್​ ಮಗನಾಗಿದ್ದು, ಈ ಹಿಂದೆ ನಡೆದ ಪೊಲೀಸ್ ಕಾನ್ಸ್​ಟೇಬಲ್​ ಪರೀಕ್ಷೆ ಅಕ್ರಮದಲ್ಲೂ ಜೈಲಿಗೆ ಹೋಗಿ ಬಂದಿದ್ದರು. ಜಾಮೀನಿನ ಮೇಲೆ ಹೊರಗೆ ಬಂದು ತಮ್ಮ ಹಳೆಯ ಚಾಳಿ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕೆಪಿಟಿಸಿಎಲ್ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Last Updated : Sep 3, 2022, 10:19 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.