ETV Bharat / state

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಇಲೆಕ್ಟ್ರಾನಿಕ್ ಡಿವೈಸ್​ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ - KPTCL recruitment illegal exam

ಕೆಪಿಟಿಸಿಎಲ್ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

KPTCL Recruitment illegal exam; anothe accused arrested

author img

By

Published : Sep 9, 2022, 7:13 PM IST

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲೆಕ್ಟ್ರಾನಿಕ್ ಡಿವೈಸ್ ಸೇರಿ ಇತರ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನ ಪೊಲೀಸರು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

KPTCL Recruitment illegal exam; anothe accused arrested
ಬಂಧಿತ ಆರೋಪಿ

ಬೆಂಗಳೂರಿನ ದೇವಸಂದ್ರ ಮೂಲದ ಮೊಹಮ್ಮದ ಅಜೀಮುದ್ದಿನ್ (37) ಬಂಧಿತ ಆರೋಪಿ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಗೋಕಾಕ್​​ ನಗರದಲ್ಲಿ ಕಳೆದ ಆಗಸ್ಟ್​​​ 7ರಂದು ಹೆಸ್ಕಾಂ ನೇಮಕಾತಿ ಪರೀಕ್ಷಾ ಅಕ್ರಮ ಬಯಲಿಗೆ ಬಂದಿತ್ತು. ಮಾಹಿತಿ ಗೊತ್ತಾಗುತ್ತಿದ್ದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ಸದ್ಯ ಮೊಹಮ್ಮದ ಅಜೀಮುದ್ದಿನ್ ಸೇರಿದಂತೆ ಪ್ರಕರಣ ಸಂಬಂಧ ಈಗಾಗಲೇ ಬೆಳಗಾವಿ ಜಿಲ್ಲಾ ಪೊಲೀಸರು ಒಟ್ಟು 17 ಆರೋಪಿಗಳನ್ನು ಬಂಧಿಸಿದ್ದಾರೆ.

ಪರೀಕ್ಷಾ ಅಕ್ರಮ‌ ನಡೆಸಲು ಬೇಕಾಗುವ ವಿವಿಧ ಬಗೆಯ ಇಲೆಕ್ಟ್ರಾನಿಕ್ ಡಿವೈಸ್​ಗಳನ್ನು ದೆಹಲಿ ಮತ್ತು ಹೈದರಾಬಾದ್​​​​ನಿಂದ ತಂದು ಸಂಜು ಭಂಡಾರಿ ಹಾಗೂ ಬೆಳಗಾವಿ ಜಿಲ್ಲೆಯ ಬೇರೆ‌ ಜನರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.

ಜಪ್ತಿ ಮಾಡಲಾದ ಇಲೆಕ್ಟ್ರಾನಿಕ್ ಡಿವೈಸ್

ಬಂಧಿತನಿಂದ ಎರಡು ಮೊಬೈಲ್ ಮತ್ತು ವಿವಿಧ ಬಗೆಯ 179 ಇಲೆಕ್ಟ್ರಾನಿಕ್ ಡಿವೈಸ್​​ಗಳು, ಇಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ 07 ಎನ್ 95 ಮಾಸ್ಕ್, ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ 41 ಬನಿಯನ್, ವಿವಿಧ ಬಗೆಯ 445 ಇಲೆಕ್ಟ್ರಾನಿಕ್ ಇಯರ್ ಪಿಸ್, ವಿವಿಧ ಬಗೆಯ 554 ಚಾರ್ಜಿಂಗ್ ಕೇಬಲ್ ಹಾಗೂ 06 ವಾಕಿಟಾಕಿಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಸಾವು.. ಪ್ರತಿಭಟಿಸಿದ ಸ್ಥಳೀಯರಿಗೆ ಪೊಲೀಸರ ಲಾಠಿ ಏಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.