ಬೆಳಗಾವಿ : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸ್ಥಾನ ಹಾಗೂ ಜಿಪಂ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಜಿಪಂ ಸದಸ್ಯ ಕೃಷ್ಣಾ ಅನಗೋಳ್ಕರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಈವರೆಗೆ ಕೆಲಸ ಮಾಡಿದರೂ ಯಾಕೋ ನನಗೆ ಕಾಂಗ್ರೆಸ್ ಪಕ್ಷ ಸರಿ ಹೊಂದಲಿಲ್ಲ. ಹೀಗಾಗಿ, ನೇಕಾರರಿಗೆ ಸೌಲಭ್ಯ ಕೊಡಿಸುವ ನಿಟ್ಟಿನಲ್ಲಿ ನಾನು ಜಿಪಂ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.
ಮುಂಬರುವ ದಿನಗಳಲ್ಲಿ ರಮೇಶ್ ಜಾರಕಿಹೊಳಿ ಆಶೀರ್ವಾದದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದೇನೆ ಎಂದರು. ಇದಲ್ಲದೇ ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.
ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದೇನೆ. ಬಿಜೆಪಿ ಪಕ್ಷ ಸೇರ್ಪಡೆ ಕುರಿತಂತೆ ಈಗಾಗಲೇ ನಾನು ಬಿಜೆಪಿ ಮುಖಂಡರೊಂದಿಗೆ ಚರ್ಚೆ ನಡೆಸಿದ್ದೇನೆ. ನನ್ನೊಂದಿಗೆ ಇನ್ನೂ ಎರಡು ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಓದಿ:ಈಶ್ವರಪ್ಪ ಅ'ಧರ್ಮ'ದ ಕಿಚ್ಚು ಹೊತ್ತಿಸಲು ಪ್ರಯತ್ನಿಸುತ್ತಿದ್ದಾರೆ: ಎಸ್.ಆರ್. ಪಾಟೀಲ್