ETV Bharat / state

ಕೃಷ್ಣಾ ನದಿ ನೀರು ಹಂಚಿಕೆ ಕುರಿತು ನಾಳೆ ಮುಂಬೈನಲ್ಲಿ ಸಭೆ: ಸಚಿವ ರಮೇಶ್​ ಜಾರಕಿಹೊಳಿ‌ - ಸಚಿವ ರಮೇಶ್​ ಜಾರಕಿಹೊಳಿ‌

ಕೃಷ್ಣಾ ನದಿಗೆ 4 ಟಿಎಂಸಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಶ್ವತವಾಗಿ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ನಾಳೆ ಮುಂಬೈನಲ್ಲಿ‌ ಮಧ್ಯಾಹ್ನ 3ಕ್ಕೆ ಮಹಾರಾಷ್ಟ್ರದ ನೀರಾವರಿ ಸಚಿವ ಜಯಂತ್ ಪಾಟೀಲ್ ಅವರೊಂದಿಗೆ ಸಭೆ ನಡೆಯಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ‌ ಹೇಳಿದರು.

belagavi
ಸಚಿವ ರಮೇಶ್​ ಜಾರಕಿಹೊಳಿ‌
author img

By

Published : Jul 7, 2020, 7:59 PM IST

ಬೆಳಗಾವಿ: ಮುಂಬರುವ ಪ್ರವಾಹ ಪರಿಸ್ಥಿತಿ ಹಾಗೂ ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ನಾಳೆ ಮುಂಬೈನಲ್ಲಿ ಸಭೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ‌ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ನದಿಗೆ 4 ಟಿಎಂಸಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಶ್ವತವಾಗಿ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ಬುಧವಾರ ಮುಂಬೈನಲ್ಲಿ‌ ಮಧ್ಯಾಹ್ನ 3ಕ್ಕೆ ಮಹಾರಾಷ್ಟ್ರದ ನೀರಾವರಿ ಸಚಿವ ಜಯಂತ್ ಪಾಟೀಲ್ ಅವರೊಂದಿಗೆ ಸಭೆ ನಡೆಯಲಿದೆ. ಸಭೆಯಲ್ಲಿ ಆ ಭಾಗಕ್ಕೆ ಸಂಬಂಧಿಸಿದ ಶಾಸಕರು, ಸಂಸದರು, ಸಚಿವರು ಭಾಗಿಯಾಗಲಿದ್ದಾರೆ ಎಂದರು.

ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ‌

ಮಹಾರಾಷ್ಟ್ರದವರು ಆಲಮಟ್ಟಿ ಡ್ಯಾಂ ಹಿನ್ನೀರು ಕೇಳುತ್ತಿದ್ದಾರೆ. ಹೀಗಾಗಿ ಪ್ರವಾಹ ಪರಿಸ್ಥಿತಿ, ಕೃಷ್ಣಾ ನದಿ ನೀರು ಹಂಚಿಕೆ ಬಗ್ಗೆ ಪ್ರಾಸಂಗಿಕವಾಗಿ ಮತ್ತೊಮ್ಮೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ಚರ್ಚಿಸಿ ಆಲಮಟ್ಟಿ ಡ್ಯಾಂ ನೀರು ಬಿಡುವ ಕುರಿತಂತೆ ಸಿಎಂ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.