ಚಿಕ್ಕೋಡಿ: ಕೆಎಸ್‌ಆರ್‌ಟಿಸಿ ಬಸ್ ಬೈಕ್ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕಣಗಲಾ (ರಾಷ್ಟ್ರೀಯ ಹೆದ್ದಾರಿ-4) ಬಳಿ ನಡೆದಿದೆ.
ನಿಪ್ಪಾಣಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಂಕೇಶ್ವರ ಸಮೀಪದ ಅಂಕಲಿ ಗ್ರಾಮದ ಮೋಹನ ಅರ್ಜುನ ಪವಾರ(34) ಮೃತರು. ಹಿಂಬದಿ ಸವಾರ ಮಹೇಶ ಮಲ್ಲಪ್ಪಾ ಮುಗಳಿ(18) ತೀವ್ರ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.